ನಾನು ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.
ಸಿದ್ದು ಹಲವು ತಿಂಗಳಿಂದ ಕ್ಷೇತ್ರ ಹುಡುಕಾಟದ ಕಸರತ್ತಿಗೆ ತೆರೆಬಿದ್ದಂತಾಗಿದೆ.ಶಬರಿಮಲೆಗೆ ಸ್ಟಾರ್‌ಗಳು, ರಾಜಕಾರಣಿಗಳ ಫೋಟೋ ಹೊತ್ತು ಕೊಂಡು ಹೋದರೆ ಪ್ರವೇಶವಿಲ್ಲ – ತೀರ್ಪು
ಕೋಲಾರದ ಮಿನಿ ಕ್ರೀಡಾಂಗಣದಲ್ಲಿ ಸೋಮವಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಈ ನಿರ್ಧಾರವನ್ನು ಪ್ರಕಟಿಸಿದರು. ಆದರೆ ಹೈಕಮಾಂಡ್ ಒಪ್ಪಿಗೆ ಮೇಲೆ ನನ್ನ ನಿರ್ಧಾರ ಅವಲಂಬಿಸಿದೆ ಎಂದು ಮಾಹಿತಿ ನೀಡಿದ್ದಾರೆ.
ಪಕ್ಷದಲ್ಲಿ ಅಭ್ಯರ್ಥಿ ಆಯ್ಕೆಗೆ ಒಂದು ಪ್ರಕ್ರಿಯೆ ಇದೆ:
ನಮ್ಮ ಪಕ್ಷದಲ್ಲಿ ಅಭ್ಯರ್ಥಿ ಆಯ್ಕೆಗೆ ಒಂದು ಪ್ರಕ್ರಿಯೆ ಇದೆ. ನಾನು ಸ್ಪರ್ಧೆ ಬಗ್ಗೆ ತಿಳಿಸಿದ್ದೇನೆ. ಆದರೆ ನನ್ನ ತೀರ್ಮಾನಕ್ಕೆ ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆ ನೀಡಬೇಕಿದೆ. ನಾನೇ ಏಕಾಂಗಿಯಾಗಿ ಘೋಷಣೆ ಮಾಡಲು ಸಾಧ್ಯವಿಲ್ಲ. ಪಕ್ಷದಲ್ಲಿ ನನಗೆ ಅಂತಾ ವಿಶೇಷ ನೀತಿ ಇಲ್ಲ. ಪಕ್ಷದಲ್ಲಿ ಎಲ್ಲರಂತೆ ನಾನು ಕೂಡ ಒಬ್ಬನಾಗಿದ್ದು, ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ ಎಂದು ತಿಳಿಸಿದರು.
ಈಗಾಗಲೇ ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಜಿದ್ದಾಜಿದ್ದಿನ ಪೈಪೋಟಿ ಶುರುವಾಗಿದೆ ಚುನಾವಣೆಯಲ್ಲಿ ಸ್ಪರ್ಧೆಗಾಗಿ ಹಲವು ಕಸರತ್ತುಗಳನ್ನು ನಡೆಸುತ್ತಲೇ ಇದ್ದಾರೆ. ಹಾಗೆಯೇ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಗೆ ಮುನ್ನವೇ ಕ್ಷೇತ್ರವನ್ನು ಆಯ್ಕೆ ಮಾಡುವ ಮೂಲಕ ಸಿದ್ದರಾಮಯ್ಯನವರು ಗೊಂದಲಗಳಿಗೆ ತರೆ ಎಳೆದಿದ್ದಾರೆ.
ರಾಜ್ಯ ರಾಜಕೀಯ ವಲಯದ ಗಮನ ಕೋಲಾರ ಕ್ಷೇತ್ರದತ್ತ ತಿರುಗಲಿದೆ. ಸಿದ್ದರಾಮಯ್ಯನವರ ನಿರ್ಧಾರದಿಂದ ಬಿಜೆಪಿ ಹಾಗೂ ಜೆಡಿಎಸ್‌ನ ಮುಂದಿನ ತೀರ್ಮಾನ ಏನಾಗಿರಬಹುದು ಎನ್ನುವುದೇ ಇದೀಗ ಕುತೂಹಲಕ್ಕೆ ಕಾರಣವಾಗಿದೆ.
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
- ಚುನಾವಣೆಗೂ ಮುನ್ನ ಕೇಜ್ರಿವಾಲ್ ಸಂಕಷ್ಟ – ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಇಡಿಗೆ ರಾಜ್ಯಪಾಲರ ಅನುಮತಿ
- ನೆಲಮಂಗಲ ಟೀ ಬೇಗೂರು ಬಳಿ ಭೀಕರ ಸರಣಿ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು
- ಪ್ರತಿ ಗ್ರಾ.ಪಂ ಅಭಿವೃದ್ಧಿಗೆ 8-9 ಕೋಟಿ ರೂ. ಅನುದಾನ: ಸಚಿವ ಮಧು ಬಂಗಾರಪ್ಪ
More Stories
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ನೆಲಮಂಗಲ ಟೀ ಬೇಗೂರು ಬಳಿ ಭೀಕರ ಸರಣಿ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು