ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬದ ಓರ್ವ ಮಹಿಳೆಗೆ ಪ್ರತಿ ತಿಂಗಳು 2,000 ಹಣ ನೀಡುವುದಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಭರವಸೆ ನೀಡಿದರು.
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಮಹಿಳಾ ಕಾಂಗ್ರೆಸ್‌ನ ‘ನಾ ನಾಯಕಿ’ ಕಾರ್ಯಕ್ರಮದಲ್ಲಿ ಭಾಗಿಯಾಗಿ ರಾಜ್ಯ ಕಾಂಗ್ರೆಸ್‌ನ ಮಹಿಳಾ ಪ್ರಣಾಳಿಕೆಯ ಕೆಲವು ಪ್ರಮುಖ ವಿಚಾರಗಳನ್ನು ಘೋಷಣೆ ಮಾಡಿದ್ದಾರೆ.
ಗೃಹ ಲಕ್ಷ್ಮಿ ಬಾಂಡ್ ಅನ್ನು ಪ್ರಿಯಾಂಕಾ ಗಾಂಧಿ ಪ್ರದರ್ಶಿಸಿದರು.ವೆಬ್ ಸೈಟ್‍ನಲ್ಲಿ ಯುವತಿಯರ ಫೋಟೋ ಅಪ್ಲೋಡ್ ಮಾಡಿ ವಂಚನೆ- ಗ್ಯಾಂಗ್ ಬಂಧನ
ರಾಜ್ಯದ ಕುಟುಂಬದ ಮಹಿಳೆಗೆ ಪ್ರತಿ ತಿಂಗಳು 2,000 ಹಣ ಕೊಡುವುದಾಗಿ ಘೋಷಣೆ ಮಾಡಿ, ಪಕ್ಷದ ವತಿಯಿಂದ ಮಾದರಿ ಚೆಕ್ ಪ್ರದರ್ಶನ ಮಾಡಿದರು. ಈ ವೇಳೆ ವೇದಿಕೆ ಮೇಲಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಹ ಚೆಕ್‌ಗೆ ಸಹಿ ಹಾಕಿದರು.
ಕಾಂಗ್ರೆಸ್ ಸರ್ಕಾರ ಬಂದರೆ ಹೀಗೆ ಸಹಿ ಹಾಕಿ ಚೆಕ್ ಕೊಡುತ್ತೇವೆ ಎಂದು ಬೃಹತ್ ಚೆಕ್ ಪ್ರದರ್ಶನ ಮಾಡಿದರು.
ಈ ವೇಳೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಬೆಲೆ ಏರಿಕೆಯಿಂದ ದಿಕ್ಕೆಟ್ಟ ರಾಜ್ಯದ ಪ್ರತಿ ಕುಟುಂಬದ ಗೃಹಿಣಿಗೆ ಪ್ರತಿ ತಿಂಗಳು 72,000 ಆರ್ಥಿಕ ನೆರವು ನೀಡುತ್ತೇವೆ. ರಾಜ್ಯ ಹಾಗೂ ದೇಶದಲ್ಲಿ ಮಹಿಳೆಯರ ಸಬಲಿಕರಣಕ್ಕೆ ನಿರಂತರವಾಗಿ ಅಗತ್ಯ ಯೋಜನೆಗಳನ್ನು ನೀಡುತ್ತಾ ಬಂದಿರುವ ಕಾಂಗ್ರೆಸ್, ಈ ಬಾರಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆಯನ್ನು ಘೋಷಣೆ ಮಾಡಲು ತೀರ್ಮಾನಿಸಿದೆ ಎಂದು ಹೇಳಿದರು.
ಮಹಿಳೆಯರು ನಮ್ಮ ಮನೆ ಹಾಗೂ ರಾಜ್ಯದ ಶಕ್ತಿ ಮೂಲವಾಗಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕುಟುಂಬ ಹಾಗೂ ಮನೆ ನಿರ್ವಹಣೆಯಲ್ಲಿ ಅವರು ಅನುಭವಿಸುತ್ತಿರುವ ಸಂಕಷ್ಟ ಅತೀವವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಮಹಿಳೆಯರ ಸಂಕಷ್ಟಕ್ಕೆ ಪ್ರಮಾಣದ ನೆರವು ನೀಡುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷ ಗೃಹಲಕ್ಷ್ಮಿ ಯೋಜನೆಯನ್ನು ಘೋಷಣೆ ಮಾಡಿದ್ದು, ಈ ಯೋಜನೆ ಮೂಲಕ ರಾಜ್ಯದ ಪ್ರತಿ ಕುಟುಂಬದ ಓರ್ವ ಗೃಹಿಣಿಗೆ ಸರ್ಕಾರದ ವತಿಯಿಂದ ಪ್ರತಿ ತಿಂಗಳು 2,000ರಂತೆ ವರ್ಷಕ್ಕೆ 24 ಸಾವಿರ ಆರ್ಥಿಕ ನೆರವನ್ನು ಕಾಂಗ್ರೆಸ್ ಸರ್ಕಾರ ಒದಗಿಸಲಿದೆ. ಈ ಯೋಜನೆಯು ರಾಜ್ಯದ 1.5 ಕೋಟಿ ಗೃಹಿಣಿಯರಿಗೆ ನೆರವಾಗಲಿದೆ ಎಂದು ಭರವಸೆ ನೀಡಿದರು.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ