ಬೆಂಗಳೂರಿನ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಮತ್ತು ವಶಿಷ್ಟ ಸೌಹಾರ್ದ ಸಹಕಾರಿ ಬ್ಯಾಂಕ್‌ಗಳಲ್ಲಿ ನಡೆದಿರುವ ಅವ್ಯವಹಾರಗಳ ಕುರಿತ ತನಿಖೆಯನ್ನು ಸಿಬಿಐಗೆ ವಹಿಸಲು ಶಿಫಾರಸು ಮಾಡಲಾಗುವುದು.
ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಈ ವಿಷಯ ತಿಳಿಸಿ, ಎರಡೂ ಸಹಕಾರಿ ಬ್ಯಾಂಕ್‌ಗಳಲ್ಲಿ ನಡೆದಿರುವ ಅಕ್ರಮಗಳ ತನಿಖೆ, ಸಾಲ ವಸೂಲಾತಿ, ಪುನಶ್ಚೇತನ ಕುರಿತು ಸ್ಥಳೀಯ ಶಾಸಕರು, ವಿಧಾನ ಪರಿಷತ್ ಸದಸ್ಯರ ಜತೆ ಸಭೆ ನಡೆಸಿದ ಬಳಿಕ ಮಾತನಾಡಿದರು.ಮಂಡ್ಯ: XUV 700 ಕಾರಿನ ಆಸೆಗೆ ತೋರಿಸಿ ಲಕ್ಷ ಲಕ್ಷ ರು ಕಳೆದಕೊಂಡ ರೈತ
ಈ ಎರಡೂ ಸಹಕಾರಿ ಬ್ಯಾಂಕ್‌ಗಳಲ್ಲಿನ ಅಕ್ರಮದ ಕುರಿತು ತನಿಖೆ ಆರಂಭವಾಗಿ ಮೂರು ವರ್ಷಗಳಾದರೂ ಸಾಲ ವಸೂಲಾತಿ ಆಗುತ್ತಿಲ್ಲ ಹಾಗೂ ಠೇವಣಿ ಹಣ ಪಾವತಿಯಾಗುತ್ತಿಲ್ಲ. ಈ ಕಾರಣದಿಂದ ತನಿಖೆಯನ್ನು ಸಿಬಿಐಗೆ ವಹಿಸಲು ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು’ ಎಂದರು.
ಠೇವಣಿದಾರರ ಹಿತ ಕಾಪಾಡುವುದು ಸರ್ಕಾರದ ಆದ್ಯತೆ. ಸಾಲ ವಸೂಲಾತಿ ಸಮರ್ಪಕ ನಡೆಯದೇ ಇರುವುದರಿಂದ ಠೇವಣಿದಾರರಿಗೆ ಹಣ ಹಿಂದಿರುಗಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ಅವರು ಸರ್ಕಾರವನ್ನು ದೂರುವಂತಾಗಿದೆ. ಈ ಎರಡೂ ಬ್ಯಾಂಕ್‌ಗಳು ಸೇರಿದಂತೆ ಇತರೆ ಯಾವುದೇ ಸಹಕಾರಿ ಸಂಸ್ಥೆಗಳಲ್ಲಿ ಈ ರೀತಿಯ ಅಕ್ರಮ ನಡೆದಿದ್ದರೂ, ಸಿಬಿಐ ತನಿಖೆಗೆ ಒಪ್ಪಿಸಲಾಗುವುದು ಎಂದು ತಿಳಿಸಿದರು.
ಎರಡೂ ಬ್ಯಾಂಕ್‌ಗಳಿಗೆ ಸಂಬಂಧಿಸಿದ ಪ್ರಕರಣಗಳ ತನಿಖೆ ಹಾಗೂ ಸಾಲ ವಸೂಲಾತಿಯಲ್ಲಿನ ಪ್ರಗತಿ ಕುರಿತು ಅಧಿಕಾರಿಗಳು ಸಭೆಗೆ ವಿವರ ನೀಡಿದರು. ‘ಸಿಬಿಐ ತನಿಖೆಗೆ ವಹಿಸಿದರೆ ಏನು ಸಮಸ್ಯೆ’ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದ ಸಚಿವರು, ಈ ಸಂಬಂಧ ಸಂಪುಟ ಸಭೆಗೆ ಮಂಡಿಸಲು ಟಿಪ್ಪಣಿ ಸಿದ್ಧಪಡಿಸುವಂತೆ ಸೂಚಿಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ