ಗ್ರಾ ಪಂ ಚುನಾವಣೆ: ಚುನಾವಣಾ ಆಯೋಗದಿಂದ ವೇಳಾಪಟ್ಟಿ ಪ್ರಕಟ

Team Newsnap
1 Min Read
Election to Tripura Legislative Assembly today - 13 percent voting ತ್ರಿಪುರಾ ವಿಧಾನ ಸಭೆಗೆ ಇಂದು ಚುನಾವಣೆ - ಶೇ 13 ರಷ್ಟು ಮತದಾನ

ರಾಜ್ಯದ ಕೆಲವು ಗ್ರಾಮ ಪಂಚಾಯತ್ ಸದಸ್ಯ ಸ್ಥಾನಗಳಿಗೆ ನಡೆಯಬೇಕಿರುವ ಚುನಾವಣೆಗೆ ಫೆ.25 ರಂದು ಮತದಾನ ನಡೆಸಲು ನಿರ್ಧರಿಸಿದೆ.

ಅವಧಿ ಮುಗಿದ ರಾಜ್ಯದ ಎಂಟು ಗ್ರಾಮ ಪಂಚಾಯತ್ ಗಳ 127 ಸ್ಥಾನಗಳು ಹಾಗೂ ವಿವಿಧ ಕಾರಣಗಳಿಂದ ತೆರವಾಗಿರುವ 103 ಗ್ರಾಮ ಪಂಚಾಯತ್ ಗಳ 135 ಸ್ಥಾನಗಳಿಗೆ ಫೆ.25ರಂದು ಉಪಚುನಾವಣೆ ನಡೆಸಲು ರಾಜ್ಯ ಚುನಾವಣ ಆಯೋಗ ನಿರ್ಧರಿಸಿದೆ.

ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಹಾಸನ, ವಿಜಯಪುರ, ವಿಜಯನಗರ ಮತ್ತು ಯಾದಗಿರಿ ಜಿಲ್ಲೆಗಳ 8 ಗ್ರಾ.ಪಂ.ಗಳ 127 ಸದಸ್ಯ ಸ್ಥಾನಗಳು ಮತ್ತು ವಿವಿಧ ಕಾರಣಗಳಿಂದ ತೆರವಾಗಿರುವ 30 ಜಿಲ್ಲೆಗಳ 103 ಗ್ರಾಮ ಪಂಚಾಯತ್ ಗಳ 135 ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಸಲಿದೆ.

  • ನಾಮಪತ್ರ ಸಲ್ಲಿಸಲು ಫೆ.14 ಕೊನೆ ದಿನ
  • ಫೆ.15ರಂದು ನಾಮಪತ್ರ ಪರಿಶೀಲನೆ
  • ನಾಮಪತ್ರ ವಾಪಸ್ ಪಡೆದುಕೊಳ್ಳಲು ಫೆ.17 ಕೊನೆ ದಿನ
  • ಫೆ. 25ರಂದು ಬೆಳಗ್ಗೆ 7ರಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ.
  • ಫೆ.28 ರಂದು ಫಲಿತಾಂಶ ಹೊರಬೀಳಲಿದೆ
Share This Article
Leave a comment