ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ವೈವಿಎಸ್ ದತ್ತಾ ಅವರನ್ನು ಮಾ. 27ಕ್ಕೆ ಕೋರ್ಟ್ಗೆ ಹಾಜರುಪಡಿಸುವಂತೆ ವಿಶೇಷ ಕೋರ್ಟ್, ಬೆಂಗಳೂರು ಉತ್ತರ ಡಿಸಿಪಿಗೆ ಸೂಚನೆ ನೀಡಿದೆ.
ಇತ್ತೀಚೆಗಷ್ಟೇ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವ ಮಾಜಿ ಶಾಸಕ ವೈ.
ಎಸ್.ವಿ. ದತ್ತಾ ವಿರುದ್ಧ ಕೋರ್ಟ್, ಬಂಧನ ವಾರಂಟ್ ಜಾರಿಗೊಳಿಸಿದೆ.
ಸಿ.ಎಸ್.ಸೋಮೇಗೌಡ ಎನ್ನುವರು ದಾಖಲಿಸಿದ್ದ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ಕೋರ್ಟ್, ವೈಎಸ್‌ವಿ ದತ್ತಾ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ.ಬೆಂಗಳೂರಿನ ‘JDS ಅಭ್ಯರ್ಥಿ ಪ್ರಭಾಕರ್ ರೆಡ್ಡಿ’ ಮನೆ – ಕಚೇರಿ ಮೇಲೆ ಐಟಿ ದಾಳಿ
ಕೋರ್ಟ್ಗೆ ಗೈರು ಹಾಜರಾದ ಹಿನ್ನೆಲೆಯಲ್ಲಿ 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶೆ ಜೆ.ಪ್ರೀತ್ ಅವರು ಮಾರ್ಚ್ 27ಕ್ಕೆ ದತ್ತಾ ಅವರನ್ನು ಕೋರ್ಟ್ಗೆ ಹಾಜರುಪಡಿಸುವಂತೆ ಬೆಂಗಳೂರು ಉತ್ತರ ಡಿಸಿಪಿಗೆ ಸೂಚನೆ ನೀಡಿದ್ದಾರೆ.
ಉದ್ಯಮಿ ಸಿ.ಎಸ್.ಸೋಮೇಗೌಡಗೆ ದತ್ತಾ ನೀಡಿದ್ದ ಚೆಕ್ ಬೌನ್ಸ್ ಆಗಿತ್ತು. ಸಾಲ ಪಡೆದಿದ್ದ ದತ್ತಾ ಅದಕ್ಕೆ ಬದಲಾಗಿ ಚೆಕ್ ನೀಡಿದ್ದರು. ಆದರೆ ಅದು ಅನೂರ್ಜಿತವಾಗಿದ್ದು ದತ್ತಾ ವಿರುದ್ಧ ದೂರು ದಾಖಲಾಗಿತ್ತು.
ಇದೀಗ ನ್ಯಾಯಾಲಯ ವಾರೆಂಟ್ ಜಾರಿ ಮಾಡಿರುವುದರಿಂದ ದತ್ತಾ ಕೋರ್ಟ್ ಗೆ ಹಾಜರಾಗುವುದು ಅನಿವಾರ್ಯವಾಗುತ್ತದೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ