December 22, 2024

Newsnap Kannada

The World at your finger tips!

speaker , wife , passed away

Former Speaker Ramesh Kumar's wife Vijayamma passed away ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪತ್ನಿ ವಿಜಯಮ್ಮ ನಿಧನ

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪತ್ನಿ ವಿಜಯಮ್ಮ ನಿಧನ

Spread the love

ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಪತ್ನಿ ವಿಜಯಕುಮಾರಿ (69) ಬೆಂಗಳೂರಿನಲ್ಲಿ ಶುಕ್ರವಾರ ವಿಧಿವಶರಾದರು.

ಪತಿ, ಮಕ್ಕಳು ಹಾಗೂ ಮೊಮ್ಮಕ್ಕಳನ್ನು ಹಾಗೂ ಬಂಧುಗಳನ್ನು ಅಗಲಿದ್ದಾರೆ.ಮಾರ್ಚ್ 9 ರಿಂದ 29 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ – ವೇಳಾ ಪಟ್ಟಿ ಪ್ರಕಟ 

ಕಳೆದ ಎರಡು ತಿಂಗಳಿಂದ ವಿಜಯಮ್ಮನವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಎರಡು ದಿನಗಳ ಹಿಂದೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ನೀಡಲಾಗಿದ್ದ ಚಿಕಿತ್ಸೆ ಫಲಕಾರಿಯಾಗದೇ ನಿಧನರಾದರು

ವಿಜಯಮ್ಮನವರ ಪಾರ್ಥಿವ ಶರೀರವನ್ನು ಕೋಲಾರ ಜಿಲ್ಲೆಯ ಶ್ರೀನಿವಾಸಪುರಕ್ಕೆ ಕೊಂಡೊಯ್ಯುವ ಸಾಧ್ಯತೆ ಇದೆ.

ಸಿದ್ದರಾಮಯ್ಯ ಸಂತಾಪ

ರಮೇಶ್‌ ಕುಮಾರ್‌ ಅವರ ಪತ್ನಿ ವಿಜಯಮ್ಮನವರ ನಿಧನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ತೀವ್ರ ಸಂತಾಪ ಸೂಚಿಸಿದ್ದಾರೆ. ಈ ವಿಚಾರವಾಗಿ ಟ್ವೀಟ್‌ ಮಾಡಿರುವ ಅವರು, ‘ಪಕ್ಷದ ಹಿರಿಯ ನಾಯಕರು, ಆತ್ಮೀಯರು ಆದ ಕೆ.ಆರ್ ರಮೇಶ್ ಕುಮಾರ್ ಧರ್ಮಪತ್ನಿ ವಿಜಯಮ್ಮ ಅವರು ನಿಧನರಾದ ಸುದ್ದಿ ತಿಳಿದು ಅತೀವ ನೋವಾಯಿತು. ರಮೇಶ್ ಕುಮಾರ್ ಅವರ ಕುಟುಂಬದ ಶೋಕದಲ್ಲಿ ನಾನೂ ಭಾಗಿ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ’ ಎಂದು ತಿಳಿಸಿದ್ದಾರೆ.

‘ಕರ್ನಾಟಕ ವಿಧಾನಸಭೆಯ ಹಿರಿಯ ಶಾಸಕರು ಹಾಗೂ ಮಾಜಿ ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ ಅವರ ಧರ್ಮಪತ್ನಿ ಶ್ರೀಮತಿ ವಿಜಯಮ್ಮನವರ ನಿಧನದ ಸುದ್ದಿ ತಿಳಿದು ಅತ್ಯಂತ ಬೇಸರವಾಯಿತು. ಮೃತರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ರಮೇಶ್ ಕುಮಾರ್ ಹಾಗೂ ಅವರ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ‌.

Copyright © All rights reserved Newsnap | Newsever by AF themes.
error: Content is protected !!