December 23, 2024

Newsnap Kannada

The World at your finger tips!

film tarak ratna

tarak ratna

ತೆಲುಗು ನಟ ನಂದಮೂರಿ ತಾರಕ ರತ್ನ ಇನ್ನಿಲ್ಲ

Spread the love

ತೀವ್ರ ಹೃದಯಾಘಾತಕ್ಕೆ ಒಳಗಾಗಿ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಫಲಕಾರಿಯಾಗದೇ ತೆಲುಗು ನಟ ನಂದಿಮೂರಿ ತಾರಕರತ್ನ (39) ಶನಿವಾರ ಕೊನೆಯುಸಿರೆಳೆದರು.

ತೆಲುಗಿನ ಖ್ಯಾತ ನಟ ಹಾಗೂ ರಾಜಕಾರಣಿ ನಂದಮೂರಿ ತಾರಕರತ್ನ ಅವರಿಗೆ ಜ.29 ರಂದು ಪಾದಯಾತ್ರೆ ವೇಳೆ ತೀವ್ರ ಹೃದಯಾಘಾತವಾಗಿತ್ತು.

ಈ ಹಿನ್ನೆಲೆಯಲ್ಲಿ ಕೂಡಲೇ ಅವರನ್ನು ಆಂಧ್ರದ ಕುಪ್ಪಂನ ಪಿಇಎಸ್ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಹೊಸೂರು ರಸ್ತೆಯ ನಾರಾಯಣ ಹೃದಯಾಲಯಕ್ಕೆ ಸ್ಥಳಾಂತರ ಮಾಡಲಾಗಿತ್ತು.

ಯಶಸ್ವಿಯಾಗಿ ಆಂಜಿಯೋಗ್ರಾಮ್ ಮಾಡಿ ಸ್ಟಂಟ್ ಅಳವಡಿಕೆ ಮಾಡಲಾಗಿತ್ತು. ಆದರೂ ಕಳೆದ 23 ದಿನಗಳಿಂದ ಜೀವನ್ಮರಣ ಹೋರಾಟ ನಡೆಸುತ್ತಿದ್ದರು. ಜೊತೆಗೆ ಆರೋಗ್ಯದಲ್ಲಿ ಚೇತರಿಕೆ ಕಂಡಿರಲಿಲ್ಲ. ಇಂದು ಚಿಕಿತ್ಸೆ ಫಲಕಾರಿಯಾದೇ ಸಾವನ್ನಪ್ಪಿದ್ದಾರೆ. ಇನ್ನೊಂದು ವಾರದಲ್ಲಿ ಜೆಡಿಎಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ – ಹೆಚ್ ಡಿ ಕೆ

ತಾರಕರತ್ನ ನಿಧನದ ಹಿನ್ನೆಲೆಯಲ್ಲಿ ಆಸ್ಪತ್ರೆಯ ಬಳಿ ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚಿನ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿದೆ.

ಪೊಲೀಸ್ ಭದ್ರತೆಯಲ್ಲಿ ಹೈದರಾಬಾದ್ ಆಸ್ಪತ್ರೆಗೆ ನಟ ತಾರಕ ರತ್ನ ಶಿಫ್ಟ್ ಮಾಡಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!