December 22, 2024

Newsnap Kannada

The World at your finger tips!

WhatsApp Image 2023 02 21 at 11.46.22 AM

ಗಾಯಕ ʻಸೋನು ನಿಗಮ್ʼ ತಂಡದ ಮೇಲೆ ಶಾಸಕನ ಪುತ್ರನಿಂದ ಹಲ್ಲೆ, ಪ್ರಕರಣ ದಾಖಲು

Spread the love

ಸೋಮವಾರ ಸಂಜೆ ಚೆಂಬೂರಿನಲ್ಲಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಶಿವಸೇನಾ (ಉದ್ಧವ್ ಠಾಕ್ರೆ ಬಣ) ಶಾಸಕ ಪ್ರಕಾಶ್ ಫಟರ್ಪೇಕರ್ ಅವರ ಪುತ್ರ ಸ್ವಪ್ನಿಲ್ ಫಟರ್ಪೇಕರ್ ಅವರು ಗಾಯಕ ಸೋನು ನಿಗಮ್ ಮತ್ತು ಅವರ ತಂಡದ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ.

ಘಟನೆಯ ಬಗ್ಗೆ ತಿಳಿದುಕೊಳ್ಳಲು ಪೊಲೀಸ್ ಅಧಿಕಾರಿಗಳು ಸೋನು ನಿಗಮ್ ಅವರೊಂದಿಗೆ ಚರ್ಚಿಸುತ್ತಿದ್ದಾರೆ. ಶಿವಸೇನಾ (ಯುಬಿಟಿ) ನಾಯಕ ಪ್ರಕಾಶ್ ಫಾಟರ್‌ಪೇಕರ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲು ಸೋನು ನಿಗಮ್ ಚೆಂಬೂರ್‌ಗೆ ಬಂದಿದ್ದರು.

ಸೋನು ನಿಗಮ್ ವೇದಿಕೆಯಿಂದ ಕೆಳಗೆ ಹೋಗುತ್ತಿದ್ದಾಗ ಕೆಲವರು ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದರು. ಆ ವೇಳೆ, ಅವರ ಅಂಗರಕ್ಷಕರು ಆ ಜನರನ್ನು ತಳ್ಳಲು ಪ್ರಯತ್ನಿಸಿದರು. ಆದರೆ, ಸೋನು ನಿಗಮ್ ತಂಡದ ಒಬ್ಬ ವ್ಯಕ್ತಿಯನ್ನು ತಪ್ಪಾಗಿ ತಳ್ಳಲಾಯಿತು. ಅವರಿಗೆ ಏನೂ ಆಗಿಲ್ಲ’ ಎಂದು ಶಿವಸೇನೆ ನಾಯಕ ಪ್ರಕಾಶ್ ಫಾಟರ್‌ಪೇಕರ್ ಹೇಳಿದ್ದಾರೆ.

ಸೋನು ನಿಗಮ್ ಕಾರ್ಯಕ್ರಮ ಮುಗಿಸಿ ವೇದಿಕೆಯಿಂದ ಕೆಳಗೆ ಬರುತ್ತಿದ್ದಾಗ ಶಾಸಕ ಫಾಟರ್‌ಪೇಕರ್ ಅವರ ಪುತ್ರ ಮೊದಲು ಸೋನು ನಿಗಮ್ ಅವರ ಅಂಗರಕ್ಷಕ ಹರಿ ಅವರನ್ನು ತಳ್ಳಿ ನಂತರ, ಸೋನು ಅವರನ್ನು ತಳ್ಳಿದ್ದಾರೆ. ಈ ಸಮಾರಂಭದಲ್ಲಿ ಸೋನು ನಿಗಮ್ ಅವರ ಸ್ನೇಹಿತ ರಬ್ಬಾನಿ ಖಾನ್ ಕೂಡ ಉಪಸ್ಥಿತರಿದ್ದರು.

ಮಾತಿನ ಚಕಮಕಿಯಲ್ಲಿ ರಬ್ಬಾನಿ ವೇದಿಕೆಯಿಂದ ಕೆಳಗೆ ಬಿದ್ದಿದ್ದಾರೆ. ಅವರಿಗೆ ಹಲವು ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಚೆಂಬೂರಿನ ಝೆನ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರಿಗೆ ಯಾವುದೇ ರೀತಿಯ ಗಾಯವಾಗಿಲ್ಲ. ರಬ್ಬಾನಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದರು.

Copyright © All rights reserved Newsnap | Newsever by AF themes.
error: Content is protected !!