ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರುಪಾಕ್ಷಪ್ಪನ ಪುತ್ರನನ್ನು 40 ಲಕ್ಷ ರು ಲಂಚ ಪಡೆಯುವ ವೇಳೆ ಲೋಕಾಯುಕ್ತ ಪೋಲಿಸರು ಬಂಧಿಸಿದ್ದಾರೆ.
ಟೆಂಡರ್ ಕೊಡಿಸಲು ಲಂಚಕ್ಕೆ ಬೇಡಿಕೆ ಇಟ್ಟು, 40 ಲಕ್ಷ ಲಂಚದ ಹಣವನ್ನು ಸ್ವೀಕರಿಸುವ ವೇಳೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಗುರುವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಗುತ್ತಿಗೆದಾರರೊಬ್ಬರು ಕೆ ಎಸ್ ಡಿ ಎಲ್ ಗೆ ಕಚ್ಚಾ ವಸ್ತುಗಳನ್ನು ಪೂರೈಕೆ ಮಾಡಲು ಟೆಂಡರ್ ಗಾಗಿ ಅರ್ಜಿ ಸಲ್ಲಿಸಿದ್ದರು.
ಈ ಗುತ್ತಿಗೆಯನ್ನು ಕೊಡಿಸುವುದಾಗಿ ಹೇಳಿ ಬೆಂಗಳೂರಿನ ಕ್ರೆಸೆಂಟ್ ರಸ್ತೆಯಲ್ಲಿನ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಹಾಗೂ ಬಿಡಬ್ಲ್ಯೂ ಎಸ್‌ಎಸ್ ಬಿ ಮುಖ್ಯ ಲೆಕ್ಕಾಧಿಕಾರಿಯಾಗಿ ಪ್ರಶಾಂತ್ 80 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಈ ಸಂಬಂಧ ಲೋಕಾಯುಕ್ತ ಪೊಲೀಸರಿಗೆ ಗುತ್ತಿಗೆದಾರರು ದೂರು ನೀಡಿದ್ದರು.
ಗುರುವಾರ ಮುಂಗಡವಾಗಿ 40 ಲಕ್ಷ ಲಂಚದ ಹಣವನ್ನು ಬೆಂಗಳೂರಿನ ಕ್ರೆಸೆಂಟ್ ರಸ್ತೆಯಲ್ಲಿರುವಂತ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಕಚೇರಿಯಲ್ಲಿ ಪುತ್ರ ಪ್ರಶಾಂತ್ ಗೆ ನೀಡುವ ವೇಳೆ ಲೋಕಾಯುಕ್ತ ಪೊಲೀಸರು ದಿಢೀರ್ ದಾಳಿ ನಡೆಸಿ, 40 ಲಕ್ಷ ಹಣದೊಂದಿಗೆ ಶಾಸಕರ ಪುತ್ರನನ್ನು ಬಂಧಿಸಿದ್ದಾರೆ.ಇದನ್ನು ಓದಿ –ಕಾಂಗ್ರೆಸ್ ಗೆ ಪಲಾಯನ ಮಾಡಲು ಸಚಿವ ನಾರಾಯಣಗೌಡ ಸಿದ್ದತೆ
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ನಕ್ಸಲ್ ನಾಯಕ ವಿಕ್ರಂ ಗೌಡ ಎನ್ಕೌಂಟರ್: ಗೃಹಸಚಿವ ಪರಮೇಶ್ವರ್ ದೃಢೀಕರಣ
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ