ಮಂಡ್ಯದ ಗೆಜ್ಜಲಗೆರೆಯಲ್ಲಿ ಬಿಜೆಪಿ ಬೃಹತ್ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲೇ ಭಾಷಣ ಆರಂಭಿಸಿ ತಾಯಿ ಭುವನೇಶ್ವರಿಗೆ ನಮಸ್ಕಾರಗಳು ಎಂದು ಮಾತು ಆರಂಭಿಸಿದರು.
ಮಂಡ್ಯ ಜಿಲ್ಲೆಯ ಜನರ ಪ್ರೀತಿಯ ಋಣವನ್ನು ಬಡ್ಡಿ ಸಮೇತ ನಮ್ಮ ಸರ್ಕಾರ ತೀರಿಸಲಿದೆ. ಕೆಲವು ದಿನಗಳಿಂದ ಎಕ್ಸ್ ಪ್ರೆಸ್ ಹೈವೇ ಬಗ್ಗೆ ಸಾಕಷ್ಟ ಚರ್ಚೆ ನಡೆಯುತ್ತಿತ್ತು. ಸಾಮಾಜಿಕ ಜಾಲತಾಣದಲ್ಲಿ ದಶಪಥ ಹೆದ್ದಾರಿ ಬಗ್ಗೆ ಚರ್ಚೆ ನಡೆಯುತ್ತಿದ್ದವು. ಮೈಸೂರು- ಬೆಂಗಳೂರು ಎಕ್ಸ್ ಪ್ರೆಸ್ ಹೈವೇ ಫೋಟೋಗಳು ವೈರಲ್ ಆಗಿದೆ. ಮೈಸೂರು-ಕುಶಾಲನಗರ 4 ಪಥದ ರಸ್ತೆಗೆ ಶಿಲಾನ್ಯಾಸ ನೆರೆವೇರಿಸಿದ್ದೇವೆ ಎಂದರು. ಮಂಡ್ಯದಲ್ಲಿ ಮೋದಿ ರೋಡ್ ಶೋ –ಅಭಿಮಾನಿಗಳಿಗೆ ಪ್ರಧಾನಿ ಪುಷ್ಪಾರ್ಚನೆ
ದಶಪಥ ಹೆದ್ದಾರಿಯಿಂದ ಈ ಭಾಗದಲ್ಲಿ ಸಾಕಷ್ಟು ಅನುಕೂಲವಾಗಲಿದೆ. ಈ ಪುಣ್ಯ ಭೂಮಿ ಒಡೆಯರ್ , ವಿಶ್ವೇಶ್ವರಯ್ಯರನ್ನು ದೇಶಕ್ಕೆ ನೀಡಿದೆ. ಭಾರತ ಇಂದು ಸಾಕಷ್ಟು ಬದಲಾವಣೆ ಆಗುತ್ತಿದೆ. ಭಾರತ ಮಾಲಾ, ಸಾಗರ ಮಾಲಾ ಯೋಜನೆಯಿಂದ ದೇಶ ಅಭಿವೃದ್ಧಿಯತ್ತ ಸಾಗಿದೆ. ಮೂಲಸೌಕರ್ಯ ಕ್ಷೇತ್ರದಲ್ಲಿ ಡಬಲ್ ಇಂಜಿನ್ ಸರ್ಕಾರದಿಂದ ಬದಲಾವಣೆಯಾಗಿದೆ ಎಂದರು. 5 ಮತ್ತು 8 ನೇ ತರಗತಿಯ ‘ಪಬ್ಲಿಕ್ ಪರೀಕ್ಷೆ’ ಮುಂದೂಡಿಕೆ
ದಶಪಥ ಹೆದ್ದಾರಿಯಿಂದ ಪ್ರವಾಸೋದ್ಯಮ ಕ್ಷೇತ್ರ ಮತ್ತಷ್ಟು ಬೆಳೆಯಲಿದೆ. 2014ಕ್ಕಿಂತ ಮೊದಲು ದೇಶದ ಬಡವರ ಬಗ್ಗೆ ಕಾಳಜಿ ತೋರಿಸಲಿಲ್ಲ. ಬಡವರ ಹೆಸರಿನ ಯೋಜನೆಯಲ್ಲಿ ಕೋಟ್ಯಂತರ ಹಣ ಲೂಟಿ ಮಾಡಿದರು ಎಂದು ಕಾಂಗ್ರೆಸ್ ವಿರುದ್ಧ ಪ್ರಧಾನಮಂತ್ರಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿ, 2014ರಲ್ಲಿ ದೇಶದ ಜನರು ನನಗೆ ಆಶೀರ್ವಾದ ನೀಡಿದರು. ಬಡವರ ಕಷ್ಟಗಳನ್ನು ಅರಿತುಕೊಂಡು ನಿವಾರಿಸಲು ಪ್ರಯತ್ನಿಸುತ್ತಿದ್ದೇವೆ. ಕಳೆದ 9 ವರ್ಷಗಳಲ್ಲಿ ಕೇಂದ್ರ ಯೋಜನೆಯಿಂದ ಬಡವರ ಬದುಕು ಹಸನಾಗಿದೆ ಎಂದರು. ರಾಜ್ಯದ ಗ್ರಾ.ಪಂಗಳಲ್ಲಿ 12 ಸಾವಿರ `ವಿವೇಕಾನಂದ’ ಸ್ವಸಹಾಯ ಗುಂಪು’ ರಚನೆ : 5 ಲಕ್ಷ ಸಾಲ, 1 ಲಕ್ಷ ಸಬ್ಸಿಡಿ
ಕರ್ನಾಟಕದಲ್ಲೂ ಬಡವರಿಗೆ ಮನೆ ನಿರ್ಮಾಣ, ಕುಡಿಯುವ ನೀರಿನ ಸಂಪರ್ಕ ನೀಡಲಾಗಿದೆ. ಜಲ್ಜೀವನ್ ಮಿಷನ್ನಡಿ 40 ಲಕ್ಷ ಕುಟುಂಬಗಳಿಗೆ ನಲ್ಲಿ ನೀರಿನ ಸಂಪರ್ಕ ನೀಡಲಾಗಿದೆ. ಬಜೆಟ್ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಹಣ ಘೋಷಣೆ ಮಾಡಲಾಗಿದೆ. ಮಂಡ್ಯ ಜಿಲ್ಲೆಯ ರೈತರ ಖಾತೆಗಳಿಗೆ ನೇರವಾಗಿ ಹಣ ಜಮೆ ಮಾಡಲಾಗಿದೆ. 3 ಲಕ್ಷಕ್ಕೂ ಹೆಚ್ಚು ರೈತರಿಗೆ 600 ಕೋಟಿಗೂ ಹೆಚ್ಚು ಹಣ ವರ್ಗಾವಣೆ ಮಾಡಲಾಗಿದೆ ಎಂದು ಮೋದಿ ಹೇಳಿದರು.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
- ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ
- ಕಾಪರ್ ಏಜ್ ಇನ್ಸ್ಟಿಟ್ಯೂಟ್ ಮಾಲೀಕ ಶರತ್ ಆತ್ಮಹತ್ಯೆ: ಕಾರಣ ನಿಗೂಢ
- 104ರನ್ಗೆ ಆಸ್ಟ್ರೇಲಿಯಾ ಆಲೌಟ್ ,ಬುಮ್ರಾಗೆ 5 ವಿಕೆಟ್
More Stories
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ