ಚಪ್ಪಲಿಯಲ್ಲಿ ಅಕ್ರಮವಾಗಿ 1.2 ಕೆ.ಜಿ ತೂಕದ ಚಿನ್ನವನ್ನು ಕದ್ದು ಸಾಗಾಣೆ ಮಾಡುತ್ತಿದ್ದ ವ್ಯಕ್ತಿಯನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.
ಅಧಿಕಾರಿಗಳು ವ್ಯಕ್ತಿಯ ಬಳಿಯಿಂದ ಒಟ್ಟು 69.40 ಲಕ್ಷ ರೂ. ಮೌಲ್ಯದ 24 ಕ್ಯಾರೆಟ್ ಶುದ್ಧತೆಯ ಸುಮಾರು 1.2 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ಈತ ಚಪ್ಪಲಿಯಲ್ಲಿ ಚಿನ್ನವನ್ನು ಬಚ್ಚಿಟ್ಟಿದ್ದನ್ನು ಕಂಡು ಕಸ್ಟಮ್ಸ್ ಅಧಿಕಾರಿಗಳು ದಂಗಾಗಿದ್ದಾರೆ.
ಇಂತಹ ಉಪಾಯಗಳನ್ನು ಬಳಸಿ ಮತ್ತೆ ಕಳ್ಳಸಾಗಣೆ ನಡೆಯದಂತೆ ಅಧಿಕಾರಿಗಳು ಇದೀಗ ವಿಮಾನದಲ್ಲಿ ಪ್ರಯಾಣಿಸುವವರ ಚಪ್ಪಲಿಗಳನ್ನು ಅತ್ಯಂತ ಜಾಗರೂಕರಾಗಿ ಪರಿಶೀಲಿಸುತ್ತಿದ್ದಾರೆ.
ಮಾ. 12 ರಂದು ಇಂಡಿಗೋ ವಿಮಾನದಲ್ಲಿ ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕನನ್ನು ಕಸ್ಟಮ್ಸ್ ಏರ್ ಇಂಟೆಲಿಜೆನ್ಸ್ ಅಧಿಕಾರಿಗಳು ತಡೆದಿದ್ದರು. ಆತನ ಬಳಿ ಪ್ರಯಾಣದ ಉದ್ದೇಶವನ್ನು ಕೇಳಿದಾಗ ಆತ ವೈದ್ಯಕೀಯ ಉದ್ದೇಶಕ್ಕಾಗಿ ಪ್ರಯಾಣಿಸುತ್ತಿರುವುದಾಗಿ ತಿಳಿಸಿದ್ದನು.
ಈ ವ್ಯಕ್ತಿ ಯಾವುದೇ ವೈದ್ಯಕೀಯ ದಾಖಲೆಗಳನ್ನು ನೀಡಲು ವಿಫಲನಾಗಿದ್ದಾನೆ. ಇದರಿಂದ ಅನುಮಾನಗೊಂಡ ಅಧಿಕಾರಿಗಳು ಆತನನ್ನು ತಪಾಸಣೆಗೆ ಒಳಪಡಿಸಿದ್ದಾರೆ. ಈ ವೇಳೆ ಆತನ ಚಪ್ಪಲಿಯಲ್ಲಿ ಗುಳಿಗಳನ್ನು ರಚಿಸಿ, ಚಿನ್ನದ ಗಟ್ಟಿಗಳನ್ನು ಹುದುಗಿಸಿಟ್ಟಿರುವುದು ಕಂಡುಬಂದಿದೆ.
ಅಧಿಕಾರಿಗಳು ಒಂದು ಜೊತೆ ಚಪ್ಪಲಿಯಲ್ಲಿ ಒಟ್ಟು 4 ಚಿನ್ನದ ಗಟ್ಟಿಗಳನ್ನು ವಶಪಡಿಸಿಕೊಂಡಿದ್ದಾರೆ.KPTCL ಎಸ್ಕಾಂ ನೌಕರರಿಗೆ ಶೇ.20 ರಷ್ಟು ವೇತನ – ಸರ್ಕಾರದ ಆದೇಶ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ
- ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
- ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ
More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ