ರಾಜ್ಯ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗವು ಕೆಲವೇ ದಿನಗಳಲ್ಲಿ ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ಚುನಾವಣಾ ಆಯೋಗ ಮಹತ್ವದ ಸೂಚನೆ ನೀಡಿದೆ.
ಚುನಾವಣಾ ಆಯೋಗದ ಅನುಮತಿ ಪಡೆಯದೆ ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಮಾಡಬಾರದು ಎಂದು ರಾಜ್ಯ ಸರ್ಕಾರಕ್ಕೆ ಚುನಾವಣಾ ಆಯೋಗ ಖಡಕ್ ಎಚ್ಚರಿಕೆ ನೀಡಿದೆ.
ರಾಜ್ಯ ಚುನಾವಣಾಕಾರಿ ಮನೋಜ್ಕುಮಾರ್ ಮೀನಾ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಅವರಿಗೆ ಪತ್ರ ಬರೆದಿದ್ದಾರೆ, ಒಂದು ವೇಳೆ ಚುನಾವಣಾ ಆಯೋಗದ ಅನುಮತಿ ಪಡೆಯದೆ ವರ್ಗಾವಣೆಗೊಳಿಸಿದರೆ ಕೇಂದ್ರ ಚುನಾವಣಾ ಆಯೋಗದ ಗಮನಕ್ಕೆ ತರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಮಾಡುವಾಗ ಮುಖ್ಯ ಚುನಾವಣಾಕಾರಿಯವರ ಸಹಮತಿ ಪಡೆಯಬೇಕೆಂದು ನಿರ್ದೇಶನ ನೀಡಿದ್ದರೂ ಇತ್ತೀಚೆಗೆ ಸರ್ಕಾರ ಈ ಬಗ್ಗೆ ಗಮನ ಹರಿಸಿಲ್ಲ ಎಂದು ಮನೋಜ್ ಕುಮಾರ್ ಮೀನಾ ಹೇಳಿದ್ದಾರೆ.ಇದನ್ನು ಓದಿ –ಮಂಡ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿ ಸ್ಪರ್ಧೆಗೆ ಸ್ಥಳೀಯ ಕಾಂಗ್ರೆಸ್ ನಾಯಕರ ಒತ್ತಾಯ
- ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
- ರೇವಣ್ಣ ರಿಲೀಸ್ : ಬಿಗ್ ರಿಲೀಪ್
- ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ
- ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್
- CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್
- ರಾಜ್ಯದಾದ್ಯಂತ ಮುಂದಿನ 5 ದಿನ ಭಾರಿ ಮಳೆ