January 28, 2026

Newsnap Kannada

The World at your finger tips!

WhatsApp Image 2023 03 20 at 4.36.42 PM

ಪದವೀಧರ ಯುವಕರಿಗೆ ನಾಲ್ಕನೇ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್ : ಮಾಸಿಕ 3 ಸಾವಿರ ರು

Spread the love

ವಿಧಾನಸಭೆ ಚುನಾವಣೆ ಚುನಾವಣೆ ಬೆನ್ನಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಯುವ ಸಮಾವೇಶ ಕಾಂಗ್ರೆಸ್ 4 ನೇ ಗ್ಯಾರೆಂಟಿ ಘೋಷಿಸಿದೆ.

ರಾಜ್ಯದ ಪದವೀಧರರಿಗೆ ಮಾಸಿಕ 3 ಸಾವಿರ ಹಣ, ಡಿಪ್ಲೋಮಾ ಪದವೀಧರರಿಗೆ ಮಾಸಿಕ 1500 ರೂ ಹಣ ನೀಡುತ್ತೇವೆ ಎಂದು ಕಾಂಗ್ರೆಸ್ ನಾಯಕರು ಘೋಷಿಸಿದರು.

ಬೆಳಗಾವಿಯಲ್ಲಿ ಯುವ ಕಾಂಗ್ರೆಸ್ ಸಮಾವೇಶದಲ್ಲಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್ ಮತ್ತಿತರರಿದ್ದಾರೆ. ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಯುವ ಕ್ರಾಂತಿ ಸಮಾವೇಶ ನಡೆಯುತ್ತಿದೆ.

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಂದು ರಾಜ್ಯಕ್ಕೆ ಭೇಟಿ ಭೇಟಿ ನೀಡಿದ್ದು, ವಿಶೇಷ ವಿಮಾನದ ಮೂಲಕ ದೆಹಲಿಯಿಂದ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.

ಕಮಲ ಕೆಸರಿನಲ್ಲಿದ್ರೆ ಚೆಂದ, ತೆನೆ ಹೊಲದಲ್ಲಿದ್ರೆ ಚೆಂದ, ಧಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿರಬೇಕು ಎಂದು ಹೇಳುವ ಮೂಲಕ ಡಿ.ಕೆ ಶಿವಕುಮಾರ್ ಈ ಬಾರಿ ಕಾಂಗ್ರೆಸ್ ಗೆ ಮತ ಹಾಕಿ ಗೆಲ್ಲಿಸಿ ಎಂದರು.

ಬೆಳಗಾವಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಡಿಕೆಶಿ ಐದೊಂದು ಐತಿಹಾಸಿಕ ಕಾರ್ಯಕ್ರಮವಾಗಿದೆ. ಕಾಂಗ್ರೆಸ್ ಶಕ್ತಿಯೇ ದೇಶದ ಶಕ್ತಿ ಎಂದು ಡಿ.ಕೆ ಶಿವಕುಮಾರ್ ಹೇಳಿದರು.

error: Content is protected !!