ಶ್ರವಣಬೆಳಗೊಳ ಜೈನ ಮಠದ ಉತ್ತರಾಧಿಕಾರಿಯಾಗಿ ಆಗಮಶಾಸ್ತ್ರಿ ಇಂದ್ರಜೈನ್ ಅವರು ನೇಮಕವಾಗಿದ್ದಾರೆ.
ಶಿವಮೊಗ್ಗ ಜಿಲ್ಲೆ ಸಾಗರ ಪಟ್ಟಣದ ಹರೆಯದ ಆಗಮಶಾಸ್ತ್ರಿ ಇಂದ್ರಜೈನ್ (22)ಅವರು ಬಿಕಾಂ ಪದವೀಧರರು. ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರ ಆರೋಗ್ಯ ಹದಗೆಡುತ್ತಿದ್ದ ಹಿನ್ನೆಲೆ ಮೂರು ತಿಂಗಳ ಹಿಂದೆಯೇ ಶ್ರವಣಬೆಳಗೊಳದ ಜೈನ ಮಠದ ಉತ್ತರಾಧಿಕಾರಿ ನೇಮಕದ ಚರ್ಚೆ ನಡೆದಿತ್ತು.
ಜೈನ ಮಠಕ್ಕೆ ಇಂದ್ರ ವಂಶಸ್ಥರೇ ಸ್ವಾಮೀಜಿಯರಾಗುವ ಪರಂಪರೆಯಿರುವುದರಿಂದ ಆ ಬಗ್ಗೆ ವಿವಿಧ ಜೈನಮಠದ ಸ್ವಾಮೀಜಿಯವರು, ಶ್ರವಣಬೆಳ ಗೊಳದ ದಿಗಂಬರ ಜೈನ ಮಠದ ಟ್ರಸ್ಟಿಗಳು, ಜೈನ ಸಮುದಾಯದ ಮುಖಂಡರು ಚರ್ಚಿಸಿ ಆಗಮಶಾಸ್ತ್ರಿ ಇಂದ್ರಜೈನ್ ಅವರನ್ನು ಉತ್ತರಾಧಿಕಾರಿಯಾಗಿ ನೇಮಕ ಮಾಡುವ ನಿರ್ಧಾರ ಕೈಗೊಳ್ಳಲಾಗಿತ್ತು.
ಆಗಮಶಾಸ್ತ್ರಿ ಇಂದ್ರಜೈನ್ ಅವರನ್ನು ಉತ್ತರಾಧಿಕಾರಿಯಾಗಿ ನೇಮಕ ಮಾಡುವ ನಿರ್ಧಾರ ಕೈಗೊಂಡ ನಂತರ ಅವರಿಗೆ ಜೈನ ಧರ್ಮದ ಕ್ಷುಲ್ಲಕ ದೀಕ್ಷೆ ನೀಡಲಾಗಿತ್ತು.
ಕಳೆದ 20 ದಿನಗಳಿಂದಲೂ ಶ್ರವಣಬೆಳಗೊಳ ಮಠದಲ್ಲಿ ಆಗಮಶಾಸ್ತ್ರಿ ಇಂದ್ರಜೈನ್ ಅವರಿಗೆ ಮಠದ ಪರಂಪರೆ, ಆಚಾರ – ವಿಚಾರ, ಮಠದ ನಿರ್ವಹಣೆಯ ಬಗ್ಗೆ ಮಾಹಿತಿ ನೀಡಲಾಗುತ್ತಿತ್ತು.
ಶ್ರವಣಬೆಳಗೊಳ ಮಠ ಪೀಠಾರೋಹಣದೊಂದಿಗೆ ಆಗಮಶಾಸ್ತ್ರಿ ಇಂದ್ರಜೈನ್ ಅವರಿಗೆ ನೂತನ ನಾಮಾಂಕಿತವಾಗಲಿದ್ದು, ಪೀಠಾರೋಹಣದ ಧಾರ್ಮಿಕ ವಿಧಿವಿಧಾನಗಳು ಇನ್ನಷ್ಟೇ ಆಗಬೇಕಾಗಿದೆ.ಇದನ್ನು ಓದಿ –ಬಿಜೆಪಿ ನಾಯಕ ಚಂದಗಾಲು ಶಿವಣ್ಣನಿಗೆ ಹೃದಯಾಘಾತ : ಆಸ್ಪತ್ರೆಗೆ ದಾಖಲು
- ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ ನಿರ್ಮಾಣದ ಪ್ರಸ್ತಾವನೆ ಸಲ್ಲಿಸಲು ಸಿಎಂ ಸಿದ್ದರಾಮಯ್ಯ ಸೂಚನೆ
- ಆಸ್ಟ್ರೇಲಿಯ ವಿರುದ್ಧ ಭರ್ಜರಿ ಗೆಲುವು: ಭಾರತ ತಂಡದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಕನಸು ಜೀವಂತ
- ನವೆಂಬರ್ 28: ರಾಜ್ಯದ ಅಭಿವೃದ್ಧಿಗೆ ಮಹತ್ವದ ಸಚಿವ ಸಂಪುಟ ಸಭೆ
- ಮುಡಾ ಹಗರಣಕ್ಕೆ ಬಿಗ್ ಟ್ವಿಸ್ಟ್: ಸರ್ಚ್ ವಾರೆಂಟ್ ಮುನ್ನವೇ ಕಡತಗಳ ಸ್ಥಳಾಂತರ ಮಾಡಿದ ಲೋಕಾಯುಕ್ತ ಡಿವೈಎಸ್ಪಿ!
- ಮುಡಾ ಹಗರಣ: ಲೋಕಾಯುಕ್ತ ಸಂಸ್ಥೆಯೇ ಅಪರಾಧಿ ಸ್ಥಾನದಲ್ಲಿದೆ- ಸ್ನೇಹಮಯಿ ಕೃಷ್ಣ ಆರೋಪ
- ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!
More Stories
ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ ನಿರ್ಮಾಣದ ಪ್ರಸ್ತಾವನೆ ಸಲ್ಲಿಸಲು ಸಿಎಂ ಸಿದ್ದರಾಮಯ್ಯ ಸೂಚನೆ
ಆಸ್ಟ್ರೇಲಿಯ ವಿರುದ್ಧ ಭರ್ಜರಿ ಗೆಲುವು: ಭಾರತ ತಂಡದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಕನಸು ಜೀವಂತ
ನವೆಂಬರ್ 28: ರಾಜ್ಯದ ಅಭಿವೃದ್ಧಿಗೆ ಮಹತ್ವದ ಸಚಿವ ಸಂಪುಟ ಸಭೆ