ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಶಿಕಾರಿಪುರದ ‘ಮೈತ್ರಿ’ ನಿವಾಸದ ಮೇಲೆ ಕಲ್ಲು ತೂರಾಟ ಮಾಡಿದ ಘಟನೆ ಜರುಗಿದೆ.
ಒಳ ಮೀಸಲಾತಿ ಕೇಂದ್ರಕ್ಕೆ ಶಿಫಾರಸ್ಸು ಮಾಡುವುದನ್ನು ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದ ಪ್ರತಿಭಟನಾಕಾರರು ಬಿಎಸ್ವೈ ನಿವಾಸ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ.
ಈ ಘಟನೆಯಲ್ಲಿ ಯಡಿಯೂರಪ್ಪನವರ ಮನೆಯ ಕಿಟಕಿಯ ಗ್ಲಾಸ್ಗಳು ಪುಡಿ ಪುಡಿಯಾಗಿವೆ.
ಶಿಕಾರಿಪುರದಲ್ಲಿ ತಾಲೂಕು ಬಂಜಾರ ಸಮಾಜ ವತಿಯಿಂದ ಬೃಹತ್ ಪ್ರತಿಭಟನೆಯು ಹಮ್ಮಿಕೊಂಡಿತ್ತು
ಈ ಪ್ರತಿಭಟನೆಯು ತಾರಕಕ್ಕೇರುತ್ತಿದ್ದಂತೆ ಪ್ರತಿಭಟನಾ ನಿರತರು ಮಾಜಿ ಸಿಎಂ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಅಲ್ಲದೇ ಅವರ ಬಿಜೆಪಿ ಕಚೇರಿ ಮೇಲಿದ್ದ ಬಿಜೆಪಿ ಪಕ್ಷದ ಬಾವುಟ ತೆರವುಗೊಳಿಸಿ ಬಂಜಾರ ಸಮುದಾಯದ ಬಾವುಟ ಹಾರಿಸಿದ್ದಾರೆ.
ಪ್ರತಿಭಟನಾಕಾರರು ಬ್ಯಾರಿಕೇಡ್ ತಳ್ಳಿ, ಪೊಲೀಸರ ಮೇಲೆಯೇ ಚಪ್ಪಲಿ, ಕಲ್ಲು ತೂರಿದ್ದಾರೆ. ಪೊಲೀಸರ ಸೂಚನೆ ಧಿಕ್ಕರಿಸಿ, ಏಕಾಏಕಿ ಮಾಜಿ ಸಿಎಂ ನಿವಾಸದ ಮೇಲೆ ಪ್ರತಿಭಟನಾಕಾರರು ಕಲ್ಲುತೂರಿದ್ದಾರೆ. ಇದರಿಂದ ಕೆಲ ಪೊಲೀಸ್ ಸಿಬ್ಬಂದಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಇನ್ನು ಪ್ರತಿಭಟನಾಕಾರರನ್ನ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದರು.
ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಅಧಿಕಾರಿ- ಸಿಬ್ಬಂದಿ ರವಾನಿಸಲಾಗುತ್ತಿದೆ.ಇದನ್ನು ಓದಿ –ಸಚಿವ ನಾರಾಯಣಗೌಡ ಫೋಟೋ ಇರುವ 450 ಸ್ಕೂಲ್ ಬ್ಯಾಗ್ ಜಪ್ತಿ
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು