January 29, 2026

Newsnap Kannada

The World at your finger tips!

election , politics , india

Arasikere Shivalingegowda resigned as MLA - Contest from Congress ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಅರಸಿಕೆರೆ ಶಿವಲಿಂಗೇಗೌಡ- ಕಾಂಗ್ರೆಸ್ ನಿಂದ ಸ್ಪರ್ಧೆ

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಅರಸಿಕೆರೆ ಶಿವಲಿಂಗೇಗೌಡ- ಕಾಂಗ್ರೆಸ್ ನಿಂದ ಸ್ಪರ್ಧೆ

Spread the love

ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸಿರುವ ಹೊತ್ತಲ್ಲೇ ಪಕ್ಷಾಂತರ ಪರ್ವ ಮತ್ತೆ ಶುರುವಾಗಿದೆ. ಜೆಡಿಎಸ್‌ ಅರಸೀಕೆರೆ ಶಾಸಕ ಶಿವಲಿಂಗೇಗೌಡ ಅವರು ತಮ್ಮ ಶಾಸಕನ ಸ್ಥಾನಕ್ಕೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ವಿಧಾನಸಭಾ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಬೆಂಬಲಿಗರೊಂದಿಗೆ ತೆರಳಿ ರಾಜೀನಾಮೆ ನೀಡಿದ್ದಾರೆ.

ತಮ್ಮ ರಾಜೀನಾಮೆ ಕುರಿತು ಪ್ರತಿಕ್ರಿಯಿಸಿರುವ ಗೌಡರು ಜೆಡಿಎಸ್ ನಾಯಕರೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯ ಸರಿಹೋಗದ ಕಾರಣ ಪಕ್ಷ ಬಿಟ್ಟಿದ್ದೇನೆ ಎಂಎಲ್‌ಸಿ ಎಲೆಕ್ಷನ್‌ನಲ್ಲಿನ ವಿಷಯದಲ್ಲಿ ಆದ ಸಣ್ಣ ಭಿನ್ನಾಭಿಪ್ರಾಯ ರಾಜೀನಾಮೆ ಕೊಡುವಂತಾಗಿದೆ. ಕಾರ್ಯಕರ್ತರ ಅಭಿಪ್ರಾಯದಂತೆ ಜೆಡಿಎಸ್ ಬಿಟ್ಟು ಕಾಂಗ್ರೆಸ್‌ಗೆ ಸೇರ್ಪಡೆಗೊಳ್ಳುತಿದ್ದೇನೆ ಎಂದು ತಿಳಿಸಿದರು.

ರಾಜಕೀಯದಲ್ಲಿ ಅಣ್ಣ-ತಮ್ಮಂದಿರೇ ಬೇರೆ ಆಗುತ್ತಾರೆ. ನಾನು ಪಕ್ಷ ಬಿಟ್ಟು ಬೇರೆ ಪಕ್ಷಕ್ಕೆ ಹೋಗಿದ್ದಕ್ಕೆ ಅವರು ತಪ್ಪು ತಿಳಿದುಕೊಳ್ಳಬಾರದು. ಎಷ್ಟು ದಿನ ಋಣ ಇರುವಷ್ಟು ದಿನ ಇದ್ದೆವು. ಋಣ ತೀರಿತು, ಈಗ ನಮ್ಮ ಕ್ಷೇತ್ರದ ಜನ ಹೇಳಿದಂತೆ ರಾಜೀನಾಮೆ ಕೊಟ್ಟು ಹೋಗಿದ್ದೇವೆ ಎಂದರು.

ಕಾಂಗ್ರೆಸ್‌ನಲ್ಲಿ ನನಗೇ ಟಿಕೆಟ್ ನೀಡುವ ಭರವಸೆ ನೀಡಿದ್ದಾರೆ. ಎರಡನೇ ಪಟ್ಟಿಯಲ್ಲಿ ಕಾಂಗ್ರೆಸ್‌ನಿಂದ ಟಿಕೆಟ್ ಘೋಷಣೆ ಆಗಲಿದೆ. ಕಾಂಗ್ರೆಸ್‌ನಿಂದ ಜೆಡಿಎಸ್‌ಗೆ ಬರುವ ನಾಯಕ ನನ್ನ ಸಂಪರ್ಕದಲ್ಲಿ ಇಲ್ಲ ಎಂದು ಹೇಳಿದರು.ಇದನ್ನು ಓದಿ –ನಂಜನಗೂಡಿನಲ್ಲಿ ಶ್ರೀಕಂಠೇಶ್ವರಸ್ವಾಮಿ ಜಾತ್ರಾ ಮಹೋತ್ಸವ : ಲಕ್ಷಾಂತರ ಭಕ್ತರ ಆಗಮನ

error: Content is protected !!