10 ನೇ ತರಗತಿ ಪರೀಕ್ಷಾ ಕೇಂದ್ರದಲ್ಲಿ ನಕಲು – ಮುಖ್ಯೋಪಾಧ್ಯಾಯ ಸೇರಿ 15 ಸಿಬ್ಬಂದಿ ಅಮಾನತು

Team Newsnap
1 Min Read

ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರದಲ್ಲಿ ಸಾಮೂಹಿಕ ನಕಲು ಹಿನ್ನೆಲೆಯಲ್ಲಿ ಮುಖ್ಯೋಪಾಧ್ಯಾಯ ಸೇರಿದಂತೆ ಪರೀಕ್ಷಾ ಕೇಂದ್ರದ 15 ಸಿಬ್ಬಂದಿಯನ್ನು ಅಮಾನತು ಮಾಡಿ ಸಾರ್ವಜನಿಕ ಶಿಕ್ಷಣ ಇಲಾಖೆ ಹೆಚ್ಚುವರಿ ಅಪರ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗೊಬ್ಬುರ್ ಬಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಪರೀಕ್ಷಾ ಕೇಂದ್ರಕ್ಕೆ ದಿಢೀರನೆ ಭೇಟಿ ನೀಡಿದ್ದಾಗ ಸಾಮೂಹಿಕ ನಕಲು ನಡೆಯುತ್ತಿರುವುದನ್ನು ಕಲಬುರಗಿ ಎಸ್‌ಪಿ ಇಶಾ ಪಂತ್ ಕಣ್ಣಾರೆ ಕಂಡಿದ್ದರು.

ಏಪ್ರಿಲ್ 3 ರಂದು ನಡೆದ ಪರೀಕ್ಷೆಯಲ್ಲಿ ಗೊಬ್ಬುರ್ ಬಿ ಗ್ರಾಮ, ಅತನೂರ್ ಗ್ರಾಮ ಸೇರಿದಂತೆ ವಿವಿಧೆಡೆ ಸಾಮೂಹಿಕ ನಕಲು ನಡೆದಿದೆ. ನಕಲು ಮಾಡಲು ವಿದ್ಯಾರ್ಥಿಗಳಿಗೆ ಮುಖ್ಯೋಪಾಧ್ಯಾಯ ಹಾಗೂ ಸಿಬ್ಬಂದಿ ಅವಕಾಶ ಮಾಡಿಕೊಟ್ಟಿದ್ದರು ಎಂದು ಆರೋಪಿಸಲಾಗಿದೆ.

ಮೈಕ್ರೋ ಜೆರಾಕ್ಸ್ ಮಾಡಿಕೊಂಡು ಪುಸ್ತಕ ಹಿಡಿದು ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ನಕಲು ಮಾಡುತ್ತಿದ್ದರು. ಈ ಕಾರಣಕ್ಕೆ ಮುಖ್ಯೋಪಾಧ್ಯಾಯ ಸೇರಿದಂತೆ 15 ಜನ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.ಇದನ್ನು ಓದಿ –42 ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ : ಮಂಡ್ಯ ರವಿ ಗಣಿಗ, ಮೇಲುಕೋಟೆ ಯಲ್ಲಿ ದರ್ಶನ್ ಗೆ ಬೆಂಬಲ

Share This Article
Leave a comment