ಪ್ರಾಜೆಕ್ಟ್ ಟೈಗರ್ಗೆ 50 ವರ್ಷ ತುಂಬಿದ ಸಂಭ್ರಮದಲ್ಲಿ ಇಂದು ಸಂಜೆ ಮೈಸೂರಿಗೆ ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆ.
ಮೈಸೂರಿನ ಱಡಿಷನ್ ಬ್ಲೂ ಹೋಟೆಲ್‌ನಲ್ಲಿ ಇಂದು ರಾತ್ರಿ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಚಾಮರಾಜನಗರ ಜಿಲ್ಲೆಯ ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಭೇಟಿ ನೀಡಲಿದ್ದಾರೆ.
ನಾಳೆ ಬೆಳಗ್ಗೆ ಮೇಲುಕಾಮನಹಳ್ಳಿ ಹೆಲಿಪ್ಯಾಡ್ಗೆ ಬಂದಿಳಿಯಲಿರುವ ಪ್ರಧಾನಿ ಮೋದಿ ಕಾರಿನಲ್ಲಿ ಬಂಡಿಪುರ ಕ್ಯಾಂಪಸ್ಗೆ ತೆರಳಲಿದ್ದಾರೆ. ಬಳಿಕ ಅಭಯಾರಣ್ಯದಲ್ಲಿ ಸಫಾರಿ ನಡೆಸಲಿದ್ದಾರೆ.
ನರೇಂದ್ರ ಮೋದಿ ಈವರೆಗೆ 7 ಬಾರಿ ಮೈಸೂರಿಗೆ ಆಗಮಿಸಿದ್ದಾರೆ. ಅದರಲ್ಲಿ 4 ಬಾರಿ ಮೈಸೂರಿನಲ್ಲೇ ವಾಸ್ತವ್ಯ ಹೂಡಿದ್ದರು. ಪ್ರಧಾನಿ ಆದ ನಂತರ ಮೋದಿ 4ನೇ ಬಾರಿಗೆ ಮೈಸೂರಿಗೆ ಬರುತ್ತಿದ್ದಾರೆ. ರ್ಯಾಡಿಸನ್ ಬ್ಲೂ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಪ್ರಧಾನಿ ಕಾರ್ಯಕ್ರಮದ ವಿವರ :
- ಇಂದು ಸಂಜೆ 7:30ಕ್ಕೆ ದೆಹಲಿಯಿಂದ ಮೈಸೂರಿಗೆ ಆಗಮನ
- ಮೈಸೂರಿನ ಱಡಿಷನ್ ಬ್ಲೂ ಹೋಟೆಲ್‌ನಲ್ಲಿ ಮೋದಿ ವಾಸ್ತವ್ಯ
- ನಾಳೆ ಬೆಳಗ್ಗೆ 6: 30 ಬಂಡೀಪುರಕ್ಕೆ ಹೆಲಿಕಾಪ್ಟರ್ನಲ್ಲಿ ಪ್ರಯಾಣ
- ಬೆಳಗ್ಗೆ 7ಕ್ಕೆ ಬಂಡೀಪುರಕ್ಕೆ ಆಗಮಿಸಿ ಅಭಯಾರಣ್ಯದಲ್ಲಿ ಸಫಾರಿ
- ಬೆಳಗ್ಗೆ 9:30ಕ್ಕೆ ತಮಿಳುನಾಡಿನ ನೀಲಗಿರೀಸ್‌ಗೆ ಮೋದಿ ಪ್ರಯಾಣ
- ಬೆಳಗ್ಗೆ 11ಕ್ಕೆ ಮೈಸೂರಿನ ಓವಲ್ ಮೈದಾನಕ್ಕೆ ಮೋದಿ ಆಗಮನ
- ಕೆಎಸ್ಒಯುನ ಘಟಿಕೋತ್ಸವ ಭವನದಲ್ಲಿ ನಡೆಯುವ ಸಂಭ್ರಮ
- ಅರಣ್ಯಾಧಿಕಾರಿಗಳು, ವಿದೇಶಿ ಅತಿಥಿಗಳ ಜೊತೆ ಪ್ರಧಾನಿ ಚರ್ಚೆ
- ಮಧ್ಯಾಹ್ನ 12:30ಕ್ಕೆ ಮಂಡಕಳ್ಳಿ ನಿಲ್ದಾಣದಿಂದ ದೆಹಲಿಗೆ ಪ್ರಯಾಣ
ಇದನ್ನು ಓದಿ –ಪಕ್ಷೇತರ ಸ್ಪರ್ಧೆಗೆ ಒತ್ತಾಯ: ಕಡೂರಿನಲ್ಲಿ ಏ 9 ರಂದು ದತ್ತ ಅಭಿಮಾನಿಗಳ ಸಭೆ
- ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!
- ಕರ್ನಾಟಕ ಸೇರಿದಂತೆ 14 ರಾಜ್ಯಗಳಲ್ಲಿ 2 ದಿನ ಭಾರೀ ಮಳೆಯ ಮುನ್ಸೂಚನೆ
- ನಂಬುಗೆಯೇ ಇಂಬು
- KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
- Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
More Stories
ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!
ಕರ್ನಾಟಕ ಸೇರಿದಂತೆ 14 ರಾಜ್ಯಗಳಲ್ಲಿ 2 ದಿನ ಭಾರೀ ಮಳೆಯ ಮುನ್ಸೂಚನೆ
ನಂಬುಗೆಯೇ ಇಂಬು