ಕಳೆದ ರಾತ್ರಿ ಸುರಿದ ಭಾರೀ ಮಳೆ ಮತ್ತು ಗಾಳಿಯ ಪರಿಣಾಮ ಬೃಹತ್ ಮರವೊಂದು ದೇವಸ್ಥಾನದ ತಗಡಿನ ಶೆಡ್ ಮೇಲೆ ಉರುಳಿ ಬಿದ್ದ ಪರಿಣಾಮ 7 ಜನರು ಸಾವನ್ನಪ್ಪಿ 30 ಮಂದಿ ಗಾಯಗೊಂಡಘಟನೆ ಮಾಹಾರಾಷ್ಟ್ರದ ಅಕೋಲಾ ಜಿಲ್ಲೆಯ ಬಾಲಾಪುರ್ ತೆಹಸಿಲ್ನ ಪಾರಸ್ ಗ್ರಾಮದ ದೇವಸ್ಥಾನದಲ್ಲಿ ನಡೆದಿದೆ.
ಪೂಜೆ ನಡೆಯುವ ವೇಳೆ ಅಲ್ಲಿನ ಬಾಬುಜಿ ಮಹರಾಜ್ ಮಂದಿರದ ಆವರಣದಲ್ಲಿದ್ದ ಬೃಹತ್ ಬೇವಿನ ಮರ ನೆಲಕಪ್ಪಳಿಸಿದೆ.
ಭಾರೀ ಗಾಳಿ, ಮಳೆಯಿಂದಾಗಿ ದೇವಸ್ಥಾನದ ತಗಡಿನ ಶೆಡ್ ಮೇಲೆ ಮರ ಉರುಳಿದೆ. ಮರ ಉರುಳಿ ಬಿದ್ದ ಪರಿಣಾಮ ಅದರಡಿಯಲ್ಲಿ ಸಿಲುಕಿದವರನ್ನು ರಕ್ಷಿಸಲು ಸ್ಥಳೀಯರು ಹರಸಾಹಸ ಪಟ್ಟಿದ್ದಾರೆ.
ಪೊಲೀಸರು ಮತ್ತು ಆ್ಯಂಬುಲೆನ್ಸ್ ಕೂಡಲೇ ಸ್ಥಳಕ್ಕಾಗಮಿಸಿ ಮರದಡಿ ಸಿಲುಕಿದವರನ್ನು ರಕ್ಷಣೆ ಮಾಡಿದ್ದಾರೆ. ಜೆಸಿಬಿ ಸಹಾಯದ ಮೂಲಕ ಶೆಡ್ ಅನ್ನು ತೆರವುಗೊಳಿಸಲಾಗಿದೆ.ಇದನ್ನು ಓದಿ –ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ : ವೈವಿಎಸ್ ದತ್ತ ಘೋಷಣೆ
- ನಂಬುಗೆಯೇ ಇಂಬು
- KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
- Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
- ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ
More Stories
ನಂಬುಗೆಯೇ ಇಂಬು
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.