March 11, 2026

Newsnap Kannada

The World at your finger tips!

BJP, government , Politics

ಹೆರಿಟೇಜ್, ಡೂಡ್ಲ, ಆರೋಕ್ಯ ಹಾಲಿನ ಬ್ರಾಂಡ್‍ಗಳು ನಂದಿನಿಯ ಅಕ್ಕತಂಗಿಯರಾ?: ಸಿಂಹ ಪ್ರಶ್ನೆ

Spread the love

ರಾಜ್ಯ ಹಲವು ವರ್ಷಗಳಿಂದ ಮಾರಾವಾಗುತ್ತಿರುವ ಹೆರಿಟೇಜ್, ಡೂಡ್ಲ, ಆರೋಕ್ಯ ಎಂಬ ಹಾಲಿನ ಬ್ರಾಂಡ್‌ಗಳು ನಂದಿನಿಯ ಅಕ್ಕತಂಗಿಯರಾ? ಅಥವಾ ತಮಿಳುನಾಡು ಮತ್ತು ಆಂಧ್ರದಿಂದ ಬಂದ ಸೊಸೆ, ಅಳಿಯಂದಿರಾ ಎಂದು ಸಂಸದ ಪ್ರತಾಪ್ ಸಿಂಹ ಮೈಸೂರಿನಲ್ಲಿ ಖಾರವಾಗಿ ಪ್ರಶ್ನೆ ಮಾಡಿದರು.

ಹೆರಿಟೇಜ್, ಡೂಡ್ಲ, ಆರೋಕ್ಯ ಹಾಲು ಇಷ್ಟು ವರ್ಷದಿಂದ ಈ ಬ್ರಾಂಡ್‍ಗಳು ಕರ್ನಾಟಕದಲ್ಲಿ ಮಾರಾಟ ಆಗುತ್ತಿಲ್ವಾ? ಬಿಜೆಪಿ ಬಂದ ಮೇಲೆ ಇವು ರಾಜ್ಯಕ್ಕೆ ಬಂದವಾ? ಕೆಎಂಎಫ್ ಬಗ್ಗೆ ನಿಜವಾದ ಕಾಳಜಿ ಬಿಜೆಪಿಗೆ ಇದೆ ಎಂದರು.

ಕೆಎಂಎಫ್‍ನಲ್ಲಿ ಅಮುಲ್ ವಿಲೀನ ಎಂಬ ವಿಚಾರ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಂಹ, ನಮ್ಮ ಸರ್ಕಾರ ಘಂಟಾ ಘೋಷವಾಗಿ ಹೇಳಿದೆ ವಿಲೀನ ಇಲ್ಲ ಅಂತಾ. ಆದರೂ ಸುಳ್ಳು, ಅಪಪ್ರಚಾರ ನಡೆಯುತ್ತಿದೆ.

ಕಾಂಗ್ರೆಸ್ ಜೆಡಿಎಸ್ ಸುಳ್ಳು ಆರೋಪವನ್ನೇ ಪುನರಾವರ್ತನೆ ಮಾಡುತ್ತಿವೆ. ಮೊದಲು ಹಿಂದಿ ಹೇರಿಕೆ ಅಂದರು, ಈಗ ಅಮುಲ್ ಹೇರಿಕೆ ಅಂತಾ ಸುಳ್ಳು ಹರಡಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.ಇದನ್ನು ಓದಿ –ಶೀಘ್ರದಲ್ಲೇ ಕಾಂಗ್ರೆಸ್ ಅಭ್ಯರ್ಥಿಗಳ ಮೂರನೇ ಪಟ್ಟಿ: ಡಿ.ಕೆ ಶಿ 

error: Content is protected !!