ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, ತಮಗೆ ಟಿಕೆಟ್ ನೀಡಿದಕ್ಕೆ ಚಾಮರಾಜಪೇಟೆ ಬಿಜೆಪಿ ಅಭ್ಯರ್ಥಿ ಭಾಸ್ಕರ್ ರಾವ್ ಬಿಜೆಪಿ ಪಕ್ಷಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
ಬಿಜೆಪಿ 189 ಟಿಕೆಟ್ ಘೋಷಣೆ ಮಾಡಿದೆ. ನನಗೂ ಸುವರ್ಣ ಅವಕಾಶ ಸಿಕ್ಕಿದೆ. ನರೇಂದ್ರ ಮೋದಿ, ಅಮಿತ್ ಶಾ, ನಡ್ಡಾ, ಅರುಣ್ ಸಿಂಗ್, ಬಿಎಸ್ ಯಡಿಯೂರಪ್ಪ, ಸಿಎಂ ಬೊಮ್ಮಾಯಿ ಸೇರಿದಂತೆ ರಾಜ್ಯ ನಾಯಕರಿಗೆ ನಾನು ಚಿರಋಣಿ. ಬಿಜೆಪಿ ಪಕ್ಷದಲ್ಲಿ ಸಿದ್ದಾಂತ, ರಾಷ್ಟ್ರೀಯತೆ ಇರೋದ್ರಿಂದ ಪಕ್ಷಕ್ಕೆ ಸೇರಿದ್ದೇನೆ.
ಕಳೆದ 30 ವರ್ಷದಿಂದ ಚಾಮರಾಜಪೇಟೆಯಲ್ಲಿ ಬಿಜೆಪಿ ಗೆದ್ದಿಲ್ಲ. ಮೇ 10 ನೇ ತಾರೀಖು ಉತ್ತರ ಸಿಗುತ್ತೆ, ಚಾಮರಾಜಪೇಟೆಗೆ ನಾನು ಹೊಸಬನಲ್ಲ, ನಾನು ಇಲ್ಲಿನ ನಿವಾಸಿ ಎಂದು ತಿಳಿಸಿದರು. ಶೀಘ್ರವೇ ಕಾಂಗ್ರೆಸ್ ನ 30 ಅಭ್ಯರ್ಥಿಗಳ 3ನೇ ಪಟ್ಟಿ ಇಂದು – ನಾಳೆ ರಿಲೀಸ್
ಚಾಮರಾಜಪೇಟೆಯಲ್ಲಿ ಟಿಕೆಟ್ ಆಕಾಂಕ್ಷಿ ಸುನೀಲ್ ವೆಂಕಟೇಶ್ ಅಸಮಾಧಾನ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಭಾಸ್ಕರ್ ರಾವ್, ಯಾವುದೇ ಅಸಮಾಧಾನವಿಲ್ಲ. ಹಾಗೇನಾದ್ರೂ ಇದ್ರೆ ಆ ನಾಯಕರನ್ನ ಭೇಟಿ ಮಾಡ್ತೀನಿ. ನಾಯಕರ ಮನವೊಲಿಸುವ ಪ್ರಯತ್ನ ಮಾಡ್ತೀನಿ. ಎಲ್ಲಾ ನಾಯಕರ ಬೆಂಬಲವಿದೆ. ಒಟ್ಟಾಗಿ ಗೆಲ್ಲುವ ವಿಶ್ವಾಸವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
- ಮುಖ್ಯಮಂತ್ರಿ ವಿರುದ್ಧ ಅಪಪ್ರಚಾರ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್
- ₹5.50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಬಂಧನ
- ಮುಡಾ ಹಗರಣ: ಸ್ನೇಹಮಯಿ ಕೃಷ್ಣ ಮತ್ತು ಕೈ ಮುಖಂಡ ಲಕ್ಷ್ಮಣ್ ನಡುವೆ ವಾಗ್ವಾದ
- ಯೋಗ ಗುರು ಶರತ್ ಜೋಯಿಸ್ ಹೃದಯಾಘಾತದಿಂದ ನಿಧನ
- ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
More Stories
ಮುಖ್ಯಮಂತ್ರಿ ವಿರುದ್ಧ ಅಪಪ್ರಚಾರ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್
₹5.50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಬಂಧನ
ಮುಡಾ ಹಗರಣ: ಸ್ನೇಹಮಯಿ ಕೃಷ್ಣ ಮತ್ತು ಕೈ ಮುಖಂಡ ಲಕ್ಷ್ಮಣ್ ನಡುವೆ ವಾಗ್ವಾದ