ಬೆಂಗಳೂರಿನ ಎಸ್.ಜೆ.ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೆಟ್ಟು ನಿಂತಿದ್ದ ಆಟೋ ಒಂದರಲ್ಲಿ 1 ಕೋಟಿ ರೂ ನಗದು ಪತ್ತೆಯಾಗಿದೆ.
ಈ ಹಣವನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು ಎಂದು ಆರೋಪಿಸಿರುವ ಪೊಲೀಸರು ಹಣವನ್ನು ಜಪ್ತಿ ಮಾಡಿದ್ದಾರೆ.
ಸುರೇಶ್, ಪ್ರವೀಣ್ ಎಂಬವರು ಆಟೋದಲ್ಲಿ 1 ಕೋಟಿ ರೂ ನಗದು ಸಾಗಿಸುತ್ತಿದ್ದಾಗ ಆಟೋ ಕೆಟ್ಟು ನಿಂತಿತ್ತು. ಅನುಮಾನಾಸ್ಪದವಾಗಿ ಕಂಡುಬಂದ ಆಟೋವನ್ನು ಪರಿಶೀಲಿಸಿದಾಗ 1 ಕೋಟಿ ರೂ. ನಗದು ಪತ್ತೆಯಾಗಿದೆ.
ನಗದಿಗೆ ಸಂಬಂಧಪಟ್ಟ ದಾಖಲೆಗಳು ಇರಲಿಲ್ಲ. ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.
ಪೊಲೀಸ್ ಠಾಣೆಗೆ ಐಟಿ ಇಲಾಖೆ ಅಧಿಕಾರಿಗಳೂ ಭೇಟಿ ನೀಡಿದ್ದು ಆರೋಪಿಗಳ ವಿಚಾರಣೆ ನಡೆಸಿದ್ದಾರೆ. ತಮ್ಮ ಬಳಿ ಇದ್ದ ನಗದು ರಾಜೇಶ್ ಎಂಟರ್‌ಪ್ರೈಸಸ್‌ಗೆ ಸೇರಿದ್ದು ಎಂದು ಆರೋಪಿಗಳು ಹೇಳಿದ್ದಾರೆ.
ವಿಜಯನಗರದಿಂದ ಜಯನಗರಕ್ಕೆ ಸಾಗಿಸಲಾಗುತ್ತಿತ್ತು ಎಂದೂ ತಿಳಿಸಿದ್ದಾರೆ.
- ನಂಬುಗೆಯೇ ಇಂಬು
- KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
- Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
More Stories
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ
ಚನ್ನಪಟ್ಟಣ: 4 ನೇ ಸುತ್ತಿನಲ್ಲಿ ನಿಖಿಲ್ ಕುಮಾರಸ್ವಾಮಿ ಮುನ್ನಡೆ