December 23, 2024

Newsnap Kannada

The World at your finger tips!

WhatsApp Image 2023 04 15 at 7.25.16 AM

ಕಾಂಗ್ರೆಸ್ ನ ಮಾಜಿ ಶಾಸಕ ದೇವನಹಳ್ಳಿ ವೆಂಕಟಸ್ವಾಮಿ ಹೃದಯಾಘಾತದಿಂದ ನಿಧನ

Spread the love

ಬೆಂಗಳೂರು : ದೇವನಹಳ್ಳಿ ಕ್ಷೇತ್ರದ ಕಾಂಗ್ರೆಸ್ ನ ಮಾಜಿ ಶಾಸಕ ವೆಂಕಟಸ್ವಾಮಿ (53) ತೀವ್ರ ಹೃದಯಾಘಾತದಿಂದ ಕಳೆದ ತಡ ರಾತ್ರಿ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.

ಕಾಂಗ್ರೆಸ್ ನ ಮಾಜಿ ಶಾಸಕ ವೆಂಕಟಸ್ವಾಮಿ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾದರು.

ವೆಂಕಟಸ್ವಾಮಿಗೆ ಕಳೆದ 1 ತಿಂಗಳಲ್ಲಿ ಮೂರು ಬಾರಿ ಎದೆನೋವು ಕಾಣಿಸಿಕೊಂಡಿತ್ತು. ಎರಡು ಬಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.

ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ್ದಕ್ಕೆ ಬೇಸರಗೊಂಡಿದ್ದ ಮಾಜಿ ಶಾಸಕ ವೆಂಕಟಸ್ವಾಮಿಗೆ ಕಳೆದ 2 ದಿನಗಳ ಹಿಂದೆಯೂ ಹೃದಯಾಘಾತವಾಗಿತ್ತು. ಆದರೆ ತಡರಾತ್ರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಸಾದರಹಳ್ಳಿಯಲ್ಲಿರುವ ನಿವಾಸದಲ್ಲಿ ಇಂದು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

Copyright © All rights reserved Newsnap | Newsever by AF themes.
error: Content is protected !!