ಕಾಂಗ್ರೆಸ್ ನವರು ತಮ್ಮ ನಡುವಿನ ಗೊಂದಲ ಬಗೆಹರಿಸಿಕೊಳ್ಳಲಿ. ಪ್ರತಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಯತ್ನ ಪಡುತ್ತಿದ್ದರೆ, ಶಿವಕುಮಾರ್ ಅವರನ್ನು ಕೆಳಗಿಳಿಸಲು ಸಿದ್ದರಾಮಯ್ಯ ಪ್ರಯತ್ನ ಪಡುತ್ತಿದ್ದಾರೆ. ಇದನ್ನು ಮುಚ್ಚಿಕೊಳ್ಳಲು ಅವರು ಮುಖ್ಯಮಂತ್ರಿಗಳ ಬದಲಾವಣೆ ಬಗ್ಗೆ ಇಲ್ಲಸಲ್ಲದ ಹೇಳಿಕೆಗಳನ್ನು ಕೊಡುತ್ತಿದ್ದಾರೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸೋಮಶೇಖರ್,
ಬಿಜೆಪಿ ಯಲ್ಲಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿಗಳ ಬದಲಾವಣೆ ಇಲ್ಲ. ಸಿದ್ದರಾಮಯ್ಯ ಅವರಿಗೆ ಅವರ ಖುರ್ಚಿಯನ್ನು ಉಳಿಸಿಕೊಂಡರೆ ಸಾಕು. ಹಾಗಾಗಿ ಬಿಜೆಪಿ ಬಗ್ಗೆ ಮಾತನಾಡುತ್ತಿದ್ದಾರೆ ಎಂದರು.
ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಮಧ್ಯೆಯೇ ಪರಸ್ಪರ ಉತ್ತಮ ಬಾಂಧವ್ಯ ಇಲ್ಲ. ಒಬ್ಬರಿಗೊಬ್ಬರು ಅಧಿಕಾರವನ್ನು ಕಿತ್ತುಕೊಳ್ಳಲು ಬಡಿದಾಡುತ್ತಿದ್ದಾರೆ ಎಂದು ಸಚಿವರು ತಿಳಿಸಿದರು.
ರಾಜರಾಜೇಶ್ವರಿ ನಗರ , ಶಿರಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವು ನೂರಕ್ಕೆ ನೂರು ಸ್ಪಷ್ಟ. ಮುನಿರತ್ನ ಅವರ ಪರ ಅಲೆ ಇರುವುದು ನಮಗೆ ಪ್ರಚಾರ ಸಂದರ್ಭದಲ್ಲಿಯೇ ಗೊತ್ತಾಗಿದೆ. ಶೇ.50ರಷ್ಟು ಮಂದಿ ಅವರ ಅಭಿವೃದ್ಧಿ ನೋಡಿ ಮತ ನೀಡಿದರೆ, ಇನ್ನು ಶೇ.50 ಮಂದಿ ಬಿಜೆಪಿ ಪಕ್ಷಕ್ಕಾಗಿ ಮತ ಚಲಾಯಿಸಿದ್ದಾರೆ. ಅಲ್ಲದೆ, ಎರಡೂ ಕಡೆ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ತಿಳಿಸಿದರು.
ಸೋಲನ್ನು ಸ್ವಾಗತಿಸಲು ಕಾಯುತ್ತಿದ್ದಾರೆ
ಈಗ ನಡೆದಿರುವ ರಾಜರಾಜೇಶ್ವರಿ ನಗರ ಹಾಗೂ ಶಿರಾ ಉಪ ಚುನಾವಣೆ ಸೇರಿದಂತೆ ನಾಲ್ಕು ವಿಧಾನಪರಿಷತ್ ಸ್ಥಾನಗಳಲ್ಲೂ ಕಾಂಗ್ರೆಸ್ ಸೋಲಬೇಕೆಂಬುದು ಅವರ ಪಕ್ಷಗಳ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಬಣ ಕಾಯುತ್ತಿದೆ. ಕಾರಣ, ಸೋತ ಮೇಲೆ ಪರಸ್ಪರ ಒಬ್ಬರ ಮೇಲೊಬ್ಬರು ಸೋಲಿಗೆ ಕಾರಣೀಭೂತರು ಎಂದು ಆರೋಪಿಸಿ ಅಧಿಕಾರದಿಂದ ಕೆಳಗಿಳಿಸುವ ಹುನ್ನಾರ ಅವರ ಪಕ್ಷದಲ್ಲಿಯೇ ನಡೆಯುತ್ತಿದೆ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
- ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ
- ಕಾಪರ್ ಏಜ್ ಇನ್ಸ್ಟಿಟ್ಯೂಟ್ ಮಾಲೀಕ ಶರತ್ ಆತ್ಮಹತ್ಯೆ: ಕಾರಣ ನಿಗೂಢ
- 104ರನ್ಗೆ ಆಸ್ಟ್ರೇಲಿಯಾ ಆಲೌಟ್ ,ಬುಮ್ರಾಗೆ 5 ವಿಕೆಟ್
More Stories
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ನಕ್ಸಲ್ ನಾಯಕ ವಿಕ್ರಂ ಗೌಡ ಎನ್ಕೌಂಟರ್: ಗೃಹಸಚಿವ ಪರಮೇಶ್ವರ್ ದೃಢೀಕರಣ