December 22, 2024

Newsnap Kannada

The World at your finger tips!

kumarswamy

ನಾನು ಮಂಡ್ಯದಿಂದ ಸ್ಪರ್ಧಿಸುವುದಿಲ್ಲ – ಕುಮಾರ ಸ್ವಾಮಿ

Spread the love

ಮಂಡ್ಯದಿಂದ ನಾನು ಸ್ಪರ್ಧೆ ಮಾಡಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮಂಗಳವಾರ ಸ್ಪಷ್ಟಪಡಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್ ಡಿ ಕೆ , ಚನ್ನಪಟ್ಟಣ ಬಿಟ್ಟು ಬೇರೆಲ್ಲೂ ನಾನು ಸ್ಪರ್ಧೆ ಮಾಡಲ್ಲ. ಮಂಡ್ಯದಲ್ಲಿ ಈಗಾಗಲೇ ಪ್ರಬಲ ಅಭ್ಯರ್ಥಿಗಳು ಇದ್ದಾರೆ.

ಈ ಹಿನ್ನೆಲೆಯಲ್ಲಿ ಮಂಡ್ಯದಿಂದ ನಾನು ಸ್ಪರ್ಧಿಸುವುದಿಲ್ಲ ಎಂದರು.

ಅಲ್ಲಿನ ಕಾರ್ಯಕರ್ತರ ಒತ್ತಡ ಇರುವುದು ನಿಜ. ಆದರೆ ಮಂಡ್ಯದಿಂದ ನಾನು ಸ್ಪರ್ಧೆ ಮಾಡುವುದಕ್ಕೆ ಆಗಲ್ಲ. ನಾನು ಚನ್ನಪಟ್ಟಣದಿಂದ ಮಾತ್ರ ಸ್ಪರ್ಧೆ ಮಾಡುತ್ತಿದ್ದೇನೆ. ಚನ್ನಪಟ್ಟಣ ಬಿಟ್ಟು ಬೇರೆಲ್ಲೂ ನಾನು ಹೋಗಲ್ಲ. ಮಂಡ್ಯದಲ್ಲಿ ಅಭ್ಯರ್ಥಿಗಳು ಇದ್ದಾರೆ.

ಈ ಬಗ್ಗೆ ಕೂತು ತೀರ್ಮಾನ ಮಾಡುತ್ತೇವೆ. ನಾಳೆ ಮೂರನೇ ಪಟ್ಟಿ ಬಿಡುಗಡೆ ಆಗಲಿದೆ ಎಂದು ತಿಳಿಸಿದರು.ಇದನ್ನು ಓದಿ –ಭೀಮ ಚಿತ್ರದ ಚಿತ್ರೀಕರಣದ ವೇಳೆ ನಟ ದುನಿಯಾ ವಿಜಯ್ ಗಾಯ

Copyright © All rights reserved Newsnap | Newsever by AF themes.
error: Content is protected !!