ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದ ಮೂರನೇ ತಲೆಮಾರು ರಾಜಕೀಯಕ್ಕೆ ಎಂಟ್ರಿ ಆಗುವ ಸೂಚನೆ ಇದೆ . ರಾಕೇಶ್ ಪುತ್ರ ಧವನ್ ಗೆ (ಮೊಮ್ಮಗನಿಗೆ) ಈಗಾಗಲೇ ರಾಜಕೀಯ ತರಬೇತಿ ನೀಡಲು ಸಿದ್ದರಾಮಯ್ಯ ಆರಂಭಿಸಿದ್ದಾರೆ.
ಮಂಗಳವಾರ ದಿ. ರಾಕೇಶ್ ಸಿದ್ದರಾಮಯ್ಯ ಪುತ್ರ ಧವನ್ ರಾಕೇಶ್ ಅವರು ಸಿದ್ದರಾಮಯ್ಯ ಅವರ ಜೊತೆಗೆ ಬೆಂಗಳೂರಿನಿಂದ ಮೈಸೂರಿಗೆ ಬಂದಿದ್ದಾರೆ.
ಈ ಬಗ್ಗೆ ಸ್ವತಃ ಸಿದ್ದರಾಮಯ್ಯ ಮಾತನಾಡಿ, ಮೊಮ್ಮಗನ ಜೊತೆ ಬಂದಿರುವುದರ ಬಗ್ಗೆ ಮಾಹಿತಿ ನೀಡಿ ಧವನ್‍ಗೆ ರಾಜಕೀಯದ ಬಗ್ಗೆ ಬಹಳ ಆಸಕ್ತಿ ಇದೆ. ನಾಮಪತ್ರ ಸಲ್ಲಿಕೆ, ಪ್ರಚಾರ ವೈಖರಿ ಎಲ್ಲವನ್ನೂ ತಿಳಿದುಕೊಳ್ಳಲು ಸ್ವಆಸಕ್ತಿಯಿಂದ ನನ್ನ ಜೊತೆ ಬಂದಿದ್ದಾನೆ ಎಂದು ತಿಳಿಸಿದರು.
ಧವನ್ ಗೆ ಇನ್ನೂ 17 ವರ್ಷ ರಾಜಕೀಯಕ್ಕೆ ಬರಲು ಬಹಳ ಸಮಯವಿದೆ. ಈಗ ಆಸಕ್ತಿಯಿಂದ ಎಲ್ಲವನ್ನೂ ನೋಡಿಕೊಳ್ಳಲು ಬರುತ್ತಿದ್ದಾನೆ. ಮೊಮ್ಮಗನಿಗೆ ರಾಜಕೀಯ ಆಸಕ್ತಿ ಇರುವುದು ತಾತನಾಗಿ ನನಗೆ ಖುಷಿ ಇದೆ. ಪ್ರಚಾರಕ್ಕೆ ಅವನು ಇಷ್ಟ ಪಟ್ಟು ಬಂದರೆ ಬರಲಿ ಎಂದು ಹೇಳಿದರು.
ಸಿದ್ದರಾಮಯ್ಯ ಅವರ ಎಡಗೈಗೆ ಗಾಯವಾಗಿ ನಂಜು ಹೆಚ್ಚಾಗಿ ಜ್ವರದಿಂದ ಬಳಲುತ್ತಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಚುನಾವಣಾ ಸಮಯ ಅದು, ಇದು ಎಂದು ಹೇಳಿಕೊಂಡು ಜ್ವರ ಬರುವುದಿಲ್ಲ. ಇದು ನಿಸರ್ಗದ ನಿಯಮ. ಇನ್ನೂ ನಾಲ್ಕೈದು ದಿನ ಸ್ವಲ್ಪ ರೆಸ್ಟ್ ಬೇಕು. ಆಮೇಲೆ ಎಲ್ಲಾ ಸರಿ ಹೋಗುತ್ತೇನೆ ಎಂದರು.ಇದನ್ನು ಓದಿ –ಸುಬ್ರಮಣ್ಯ ಬಳಿ ಭೀಕರ ಕಾರು ಅಪಘಾತ : ಸ್ಥಳದಲ್ಲೇ ನಾಲ್ವರ ದುರಂತ ಸಾವು
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ