ರಾಜ್ಯಾದ್ಯಂತ ಇಂದು ಮೋಡ ಕವಿದ ವಾತಾವರಣವಿರಲಿದ್ದು, ಮಡಿಕೇರಿ ಹಾಗೂ ಹಾಸನದಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮುಂದಿನ 5 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಬಳ್ಳಾರಿ, ಚಾಮರಾಜನಗರ, ಕೋಲಾರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಏಪ್ರಿಲ್ 23 ರಿಂದ ಏಪ್ರಿಲ್ 25 ರವರೆಗೆ ಮಳೆಯಾಗಲಿದೆ .
ಉತ್ತರ ಒಳನಾಡಿನ ಬೆಳಗಾವಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಇಂದಿನಿಂದ 5 ದಿನ ಮಳೆಯಾಗಲಿದೆ. ಏಪ್ರಿಲ್ 21, 22 ಮತ್ತು 25 ರಂದು ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಏ.23 ರಿಂದ ಏ.25 ರವರೆಗೆ ಕೊಪ್ಪಳ ಮತ್ತು ಯಾದಗಿರಿಯಲ್ಲಿ ಮಳೆಯಾಗಲಿದೆ.
ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 21 ರಿಂದ ಏಪ್ರಿಲ್ 25 ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು