January 4, 2025

Newsnap Kannada

The World at your finger tips!

teacher, learning, school

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟ: ಶೇ. 74.64 ಮಂದಿ ತೇರ್ಗಡೆ

Spread the love


2022-23 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಹೊರ ಬಿದ್ದಿದೆ. ಈ ಬಾರಿ ಶೇ. 74.64 ಫಲಿತಾಂಶ ಬಂದಿದೆ. ಕಳೆದ ಬಾರಿ 61.88 ಫಲಿತಾಂಶ ಬಂದಿತ್ತು ಎಂದು ಪಿಯು ಬೋರ್ಡ್ ಅಧ್ಯಕ್ಷ ಡಾ.ರಾಮಚಂದ್ರನ್‌ ತಿಳಿಸಿದರು.

ಸುದ್ದಿಗಾರರ ಜೊತೆ ಮಾತನಾಡಿದ ರಾಮಚಂದ್ರನ್ ಮಾರ್ಚ್ 09 ರಿಂದ ಮಾರ್ಚ್ 29ರವರೆಗೆ ನಡೆದ ಪಿಯುಸಿ ಪರೀಕ್ಷೆಯಲ್ಲಿ ಈ ಬಾರಿ ವಿದ್ಯಾರ್ಥಿಗಳು-3,63,698, ವಿದ್ಯಾರ್ಥಿನಿಯರು- 3,62,497 ಸೇರಿ ಒಟ್ಟು 7,26,195 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಈ ಪೈಕಿ ಹೊಸಬರು 6.29 ಲಕ್ಷ ವಿದ್ಯಾರ್ಥಿಗಳು, ಖಾಸಗಿ 25,847 ವಿದ್ಯಾರ್ಥಿಗಳು, ಪುನರಾವರ್ತಿತ 70,589 ವಿದ್ಯಾರ್ಥಿಗಳು, ಕಲಾ ವಿಭಾಗ 2,34,815 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗ 2,47,260 ವಿದ್ಯಾರ್ಥಿಗಳು, ವಿಜ್ಞಾನ ವಿಭಾಗ 2,44,120 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.

ದಕ್ಷಿಣ ಕನ್ನಡ ಪ್ರಥಮ – ಯಾದಗಿರಿ ಕೊನೆಯ ಸ್ಥಾನ

ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ ಉಡುಪಿ ಜಿಲ್ಲೆಗೆ 2ನೇ ಸ್ಥಾನ ಲಭಿಸಿದೆ. ಕೊಡಗು 3, ಉತ್ತರ ಕನ್ನಡ 4, ಯಾದಗಿರಿ ಕೊನೆಯ ಸ್ಥಾನದಲ್ಲಿದೆ.
ಈ ಪರೀಕ್ಷೆಯಲ್ಲಿ ಒಟ್ಟು 5,24,209 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಸಂಖ್ಯೆ 1,34,876. ಕಲಾ ವಿಭಾಗದಲ್ಲಿ ಶೇಕಡಾ 61.22ರಷ್ಟು ಫಲಿತಾಂಶ ಬಂದಿದೆ. ಒಟ್ಟು 61 ಕೇಂದ್ರದಲ್ಲಿ ಮೌಲ್ಯಮಾಪನ ಮಾಡಲಾಗಿದೆ. ಅಧಿಕೃತ ವೆಬ್‌ಸೈಟ್ karresults.nic.in ನಲ್ಲಿ ಫಲಿತಾಂಶ ದೊರೆಯುತ್ತದೆ.

Copyright © All rights reserved Newsnap | Newsever by AF themes.
error: Content is protected !!