ತುಮಕೂರಿನ ಸಿದ್ಧಗಂಗಾ ಮಠದ ಉತ್ತರಾಧಿಕಾರಿ ಸ್ವಾಮಿಗಳಿಗೆ ಭಾನುವಾರ ಶ್ರೀಮಠದಲ್ಲಿ ಜಂಗಮಪಟ್ಟಾಧಿಕಾರ ಮಹೋತ್ಸವ ಜರುಗಿತು.
ಸಿದ್ಧಗಂಗಾ ಮಠದ ಉತ್ತರಾಧಿಕಾರಿ ಸ್ವಾಮಿಗಳಿಗೆ ಶ್ರೀ ಶಿವಸಿದ್ದೇಶ್ವರ ಎಂಬ ಯೋಗ ಪಟ್ಟ ನೀಡಲಾಗಿದೆ.
ಸಿದ್ಧಗಂಗೆಯ ಪೀಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿಗಳು, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳು ಸೇರಿದಂತೆ ಹಲವು ಮಠಾಧ್ಯಕ್ಷರು ಹಾಗೂ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಬಸವಜಯಂತಿ ಹಿನ್ನೆಲೆಯಲ್ಲಿ ಸಿದ್ಧಗಂಗಾ ಮಠದಲ್ಲಿ ಪಟ್ಟಾಭಿಷೇಕ ಕಾರ್ಯಕ್ರಮ ನಡೆಸಲಾಗಿದೆ.
ಮಾಗಡಿ ತಾಲೂಕಿನ ಕಂಚುಗಲ್ ಬಂಡೆಮಠ ಹಾಗೂ ದೇವನಹಳ್ಳಿ ಬಸವಕಲ್ಯಾಣ ಮಠದ ಉತ್ತರಾಧಿಕಾರಿಗಳಿಗೂ ಸಭಾ ಕಾರ್ಯಕ್ರಮದಲ್ಲಿ ಅಭಿದಾನವನ್ನು ಘೋಷಣೆ ಮಾಡಲಾಗಿದೆ.
ಬಂಡೆ ಮಠದ ಉತ್ತರಾಧಿಕಾರಿಗಳಿಗೆ ಶ್ರೀ ಮಹಾಲಿಂಗ ಸ್ವಾಮೀಜಿ, ದೇವನಹಳ್ಳಿಯ ಬಸವಕಲ್ಯಾಣ ಮಠದ ಉತ್ತರಾಧಿಕಾರಿಗಳಿಗೆ ಸದಾಶಿವ ಸ್ವಾಮೀಜಿ ಎಂಬ ಅಭಿದಾನ ನೀಡಲಾಗಿದೆ.ಇದನ್ನು ಓದಿ –ಇಬ್ಬರು ‘ಐಪಿಎಸ್ ‘ ಅಧಿಕಾರಿಗಳ ವರ್ಗಾವಣೆ
ಸಿದ್ಧಗಂಗೆಯ ಶ್ರೀ ಶಿವಕುಮಾರ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಿರಾಭಾರಿ ನಿರಂಜನ ಜಂಗಮಪಟ್ಟಾಧಿಕಾರ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
More Stories
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ