ಮೈಸೂರು ಜಿಲ್ಲಾಧಿbಕಾರಿ ರೋಹಿಣಿ ಸಿಂಧೂರಿ ನೇಮಕ ವಿರೋಧಿಸಿ ಐಎಎಸ್ ಅಧಿಕಾರಿ ಬಿ. ಶರತ್ ಸಿಎಟಿ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಅರ್ಜಿಯ
ಇತ್ಯರ್ಥ ನಾಳೆಯೇ ಆಗುವ ಸಾಧ್ಯತೆ ಇದೆ.
ಈಗಾಗಲೇ ಅರ್ಜಿ ವಿಚಾರಣೆ
ಮಾಡಿರುವ ನ್ಯಾಯಾಲಯದ ನಾಳೆಯೇ ತೀರ್ಪು ಹೊರಬೀಳುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಬಿ. ಶರತ್ ಅವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಿಸಿದ್ದ 29 ದಿನಗಳಲ್ಲೇ, ಅವರನ್ನು ವರ್ಗಮಾಡಿ ಆ ಜಾಗಕ್ಕೆ ರೋಹಿಣಿಯವರನ್ನು ಸರ್ಕಾರ ತಂದು ಕೂರಿಸಿತ್ತು. ಸರ್ಕಾರದ ನಡೆಯನ್ನು ವಿರೋಧಿಸಿದ ನಿರ್ಗಮಿತ ಜಿಲ್ಲಾಧಿಕಾರಿ ಶರತ್ ಸಿಎಟಿ ನ್ಯಾಯಾಲದಲ್ಲಿ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ಅರ್ಜಿಯ ವಿಚಾರಣೆ ಪದೇ ಪದೇ ಮುಂದಕ್ಕೆ ಹೋಗುತ್ತಲೇ ಇತ್ತು.
ಹಲವು ದಿನಗಳಿಂದ ವಿಚಾರಣೆ ನಡೆಸಿರುವ ಸಿಎಟಿ ನ್ಯಾಯಾಲಯ ನಾಳೆ ನೀಡಲಿರುವ ತೀರ್ಪು ಶರತ್ ಪರವಾದರೆ, ರೋಹಿಣಿಯವರಿಗೆ ಮಾತ್ರವಲ್ಲದೇ ಸರ್ಕಾರಕ್ಕೂ ಸಹ ತೀವ್ರ ತರಹದ ಸಂಕಷ್ಟವನ್ನು ತಂದೊಡ್ಡಲಿದೆ.
ಕೆಲ ದಿನಗಳ ಹಿಂದೆ ಶರತ್ ತಮಗೆ ನ್ಯಾಯ ಸಿಗುತ್ತಿಲ್ಲವೆಂದು ಖಿನ್ನತೆಗೊಳಗಾಗಿ ಆಸ್ಪತ್ರೆಯನ್ನೂ ಸೇರಿದ್ದರು.
- ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
- ಎಳ್ಳು ಬೆಲ್ಲ ತಿಂದು ಅರೋಗ್ಯ ಹೆಚ್ಚಿಸಿಕೊಳ್ಳಿ
- ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
- ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
- ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
More Stories
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
ತಿರುಪತಿಯಲ್ಲಿ ಕಾಲ್ತುಳಿತ: 6 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ
ಅಮಿತ್ ಶಾ ಹೇಳಿಕೆ ವಿರೋಧಿಸಿ ಮೈಸೂರು-ಮಂಡ್ಯ ಬಂದ್: ವಾಹನ ಸಂಚಾರಕ್ಕೆ ಅಡಚಣೆ