ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಬೆಳಗಾವಿಯ ಹಿರಿಯ ಕಾಂಗ್ರೆಸ್ ಮುಖಂಡ ಡಿ.ಬಿ. ಇನಾಮದಾರ್ ಕಳೆದ ತಡರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಕಳೆದೊಂದು ತಿಂಗಳಿಂದ ಡಿ.ಬಿ. ಇನಾಮದಾರ್ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಡಿ.ಬಿ.ಇನಾಮದಾರ್ ಅವರು 1983ರಲ್ಲಿ ಜನತಾ ಪಕ್ಷದಿಂದ ಕಿತ್ತೂರು ಕ್ಷೇತ್ರದಿಂದ ಸ್ಪರ್ಧಿಸಿ ಮೊದಲ ಸಲ ಗೆಲುವು ಕಮಡಿದ್ದರು. 1994 ರಲ್ಲಿ ಕಾಂಗ್ರೆಸ್ ಸೇರ್ಪಡೆ ಆಗಿ ಇಂದಿನವರೆಗೂ ಇನಾಮದಾರ್ ಅವರು ಕಾಂಗ್ರೆಸ್‌ನಲ್ಲಿದ್ದರು. ಒಟ್ಟು 9 ಚುನಾವಣೆಗಳನ್ನು ಎದುರಿಸಿ ಐದು ಚುನಾವಣೆಗಳಲ್ಲಿ ಗೆಲುವು ದಾಖಲಿಸಿದ್ದರು.
ದೇವರಾಜ ಅರಸು, ಎಸ್.ಎಂ ಕೃಷ್ಣ, ಎಸ್. ಬಂಗಾರಪ್ಪ ಸರ್ಕಾರದಲ್ಲಿ ಸಚಿವರಾಗಿದ್ದರು. 1983, 1985 ರಲ್ಲಿ ಜನತಾ ಪಕ್ಷದಿಂದ, 1994, 1999, 2013ರ ಕಾಂಗ್ರೆಸ್ ಪಕ್ಷದಿಂದ ಗೆಲುವು ಸಾಧಿಸಿದ್ದರು. 1989, 2004, 2008 ಹಾಗೂ 2018 ರಲ್ಲಿ ಸೋಲು ಕಂಡಿದ್ದರು.ಶ್ರೀ ರಾಮಾನುಜಾಚಾರ್ಯರು (Sri Ramanujacharya)
2023 ರ ಚುನಾವಣೆಯಲ್ಲಿ ಕಿತ್ತೂರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಡಿ.ಬಿ ಇನಾಮದಾರ್ ಅವರಿಗೆ ಅನಾರೋಗ್ಯ ಕಾರಣಕ್ಕೆ ಇನಾಮದಾರ್ ಬದಲು ಬಾಬಾಸಾಹೇಬ್ ಪಾಟೀಲಗೆ ಕಾಂಗ್ರೆಸ್ ಟಿಕೆಟ್ ನೀಡಿದೆ.
- ₹450 ಕೋಟಿ ವಂಚನೆ ಹಗರಣ: ಟೀಂ ಇಂಡಿಯಾ ಆಟಗಾರ ಶುಭಮನ್ ಗಿಲ್ಗೆ CID ಸಮನ್ಸ್
- ಮನು ಭಾಕರ್, ಡಿ ಗುಕೇಶ್ ಸೇರಿದಂತೆ ನಾಲ್ವರಿಗೆ 2024ರ ಖೇಲ್ ರತ್ನ ಪ್ರಶಸ್ತಿ
- 2025ರ ಕರ್ನಾಟಕ SSLC ಮಾದರಿ ಪ್ರಶ್ನೆಪತ್ರಿಕೆ ಪ್ರಕಟ
- KPSC ಮೂಲಕ ಕೃಷಿ ಇಲಾಖೆಯಲ್ಲಿ 945 ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ
- 1.20 ಲಕ್ಷ ಲಂಚ ಸ್ವೀಕಾರ : ಲೋಕಾಯುಕ್ತ ಬಲೆಗೆ ಬಿದ್ದ ನೀರಾವರಿ ನಿಗಮದ ಅಧಿಕಾರಿಗಳು
- ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವಾಗ ಕೆರೆಗೆ ಉರುಳಿದ ಕಾರು : ಇಬ್ಬರ ಸಾವು
More Stories
₹450 ಕೋಟಿ ವಂಚನೆ ಹಗರಣ: ಟೀಂ ಇಂಡಿಯಾ ಆಟಗಾರ ಶುಭಮನ್ ಗಿಲ್ಗೆ CID ಸಮನ್ಸ್
ಮನು ಭಾಕರ್, ಡಿ ಗುಕೇಶ್ ಸೇರಿದಂತೆ ನಾಲ್ವರಿಗೆ 2024ರ ಖೇಲ್ ರತ್ನ ಪ್ರಶಸ್ತಿ
2025ರ ಕರ್ನಾಟಕ SSLC ಮಾದರಿ ಪ್ರಶ್ನೆಪತ್ರಿಕೆ ಪ್ರಕಟ