ಏಪ್ರಿಲ್ 29 ರ ಶನಿವಾರ ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಭೇಟಿ ನೀಡುತ್ತಿದ್ದಾರೆ. ಮೋದಿ ಪ್ರಚಾರಕ್ಕೆ ಎಸ್‌ಪಿಜಿ ತಂಡ ಬೆಂಗಳೂರಿಗೆ ಸ್ಪೆಷಲ್ ಪ್ರೂಫ್ ವಾಹನ ಕಳುಹಿಸಿದೆ, ಮೋದಿ ನಡೆಸಲಿರುವ ಮೆಗಾ ರೋಡ್ ಶೋಗಾಗಿ ಬುಲೆಟ್ ಪ್ರೂಫ್ ವಾಹನ ಸಿದ್ಧವಾಗಿದೆ.
ಮೋದಿ ಸುರಕ್ಷತಾ ದೃಷ್ಟಿಯಿಂದಾಗಿ ಈ ಬಾರಿ ಬುಲೆಟ್ ಪ್ರೂಫ್ ವಾಹನ ಸಿದ್ಧಪಡಿಸಿದ್ದು, ಬುಲೆಟ್ ಪ್ರೂಫ್ ವಾಹನದಲ್ಲೇ ಮೋದಿ ರೋಡ್ ಶೋ ನಡೆಸಲಿದ್ದಾರೆ. ಬೆಂಗಳೂರು, ಮೈಸೂರು ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಇದೇ ವಾಹನದಲ್ಲಿ ಮೋದಿ ರೋಡ್ ಶೋ ನಡೆಸಲಿದ್ದಾರೆ.
ಬೆಳಗಾವಿಯಿಂದ ಬೆಂಗಳೂರಿಗೆ ಬರುತ್ತಿರುವ ಮೋದಿ ಅವರು ಸಂಜೆ 4.30ಕ್ಕೆ ಇಲ್ಲಿನ ಹೆಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿದ್ದಾರೆ. ಅಂದು ಮಧ್ಯಾಹ್ನ 2 ಗಂಟೆಯಿಂದ ಮಾಗಡಿ ರಸ್ತೆ ಬಂದ್ ಆಗಲಿದೆ.
ಬಿಐಇಸಿ ನಿಂದ ನೈಸ್ ರಸ್ತೆ ಮೂಲಕ ಮಾಗಡಿ ರಸ್ತೆಗೆ ಪ್ರಯಾಣ ಬೆಳೆಸಲಿದ್ದಾರೆ. ಮಾಗಡಿ ರಸ್ತೆಯಿಂದ ಸುಮ್ಮನಹಳ್ಳಿಯ ತನಕ ರೋಡ್ ಶೋ ನಡೆಸಲಿದ್ದಾರೆ. ಮೋದಿ ಬರುವ 1 ಗಂಟೆಗೂ ಮುನ್ನವೇ ನೈಸ್ ರಸ್ತೆ ಸಂಚಾರವನ್ನೂ ಬಂದ್ ಮಾಡಲಾಗುತ್ತದೆ.
ಸುಮ್ಮನಹಳ್ಳಿ ರೋಡ್ ಶೋ ಬಳಿಕ ಗೊರಗುಂಟೆಪಾಳ್ಯ, ಮೇಖ್ರೀ ಸರ್ಕಲ್ ಮೂಲಕ ರಾಜಭವನಕ್ಕೆ ತೆರಳಲಿದ್ದಾರೆ. ಶನಿವಾರ ರಾಜಭವನದಲ್ಲೇ ವಾಸ್ತವ್ಯ , ಭಾನುವಾರ ನಿಗದಿತ ಕಾರ್ಯಕ್ರಮ ಮುಗಿಸಿ ಅಂದು ಸಂಜೆ ದೆಹಲಿಗೆ ಮರಳಲಿದ್ದಾರೆ.
- ಜಲಗಾರ ಮತ್ತು ಕಾಲ ಜ್ಞಾನಿ ಕನಕ ನಾಟಕಗಳಲ್ಲಿ ದೈವ-ದೇಗುಲ ಸಂಕಥನ
- ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
- ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
More Stories
ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು