November 22, 2024

Newsnap Kannada

The World at your finger tips!

modi

ಕರ್ನಾಟಕ ಜನತೆಯ ಕನಸುಗಳೇ ನನ್ನ ಕನಸು – ಪ್ರಧಾನಿ ಮೋದಿ

Spread the love

ರಾಜ್ಯದ ಜನತೆಯ ಕನಸುಗಳೇ ನನ್ನ ಕನಸು ಎಂದು ಪ್ರಧಾನಿ ಮೋದಿ ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.

ರಾಜ್ಯದಲ್ಲಿ ನಾಳೆ( ಮೇ 10 ರಂದು ) ನಡೆಯಲಿರುವ ವಿಧಾನಸಭಾ ಚುನಾವಣೆಯ ಹೈವೋಲ್ಟೇಜ್ ಪ್ರಚಾರ ಕೊನೆಗೊಂಡ ನಂತರ, ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ರಾಜ್ಯದ ಜನತೆಗೆ ಅವರ ಕನಸುಗಳನ್ನು ತಮ್ಮ ಕನಸು ಎಂಬ ಭರವಸೆ ನೀಡಿದರು.

ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಪ್ರಧಾನಿ ಮೋದಿ, “ಪ್ರತಿಯೊಬ್ಬ ಕನ್ನಡಿಗನ ಕನಸು ನನ್ನ ಸ್ವಂತ ಕನಸು, ನಿಮ್ಮ ನಿರ್ಣಯವೇ ನನ್ನ ನಿರ್ಣಯ” ಎಂದು ಹೇಳಿದ್ದಾರೆ.

ದೇಶದ ಆರ್ಥಿಕತೆಯಲ್ಲಿ ಕರ್ನಾಟಕದ ಮಹತ್ವದ ಪಾತ್ರವನ್ನು ಎತ್ತಿ ಹಿಡಿದ ಪ್ರಧಾನಿ, “ಭಾರತವು ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ. ಶೀಘ್ರದಲ್ಲೇ ಭಾರತವು ವಿಶ್ವದ ಅಗ್ರ ಮೂರು ಆರ್ಥಿಕತೆಗಳಲ್ಲಿ ಒಂದಾಗಬೇಕು. ಅದಕ್ಕಾಗಿ ಕರ್ನಾಟಕದ ಆರ್ಥಿಕತೆಯು ಅಭಿವೃದ್ಧಿ ಹೊಂದಿದಾಗ ಮಾತ್ರ ಇದು ಸಾಧ್ಯ” ಎಂದರು.

ಕೋವಿಡ್ ಸಂದರ್ಭದಲ್ಲಿಯೂ ಕರ್ನಾಟಕ ಬಿಜೆಪಿಯ ನೇತೃತ್ವದಲ್ಲಿ ವಾರ್ಷಿಕ 90 ಸಾವಿರ ಕೋಟಿ ವಿದೇಶಿ ಬಂಡವಾಳ ಹೂಡಿಕೆಯಾಗಿದೆ. ಆದರೆ, ಹಿಂದಿನ ಸರ್ಕಾರಗಳ ಅವಧಿಯಲ್ಲಿ ಕರ್ನಾಟಕವು ವಾರ್ಷಿಕ ಸುಮಾರು 30 ಸಾವಿರ ಕೋಟಿ ವಿದೇಶಿ ಹೂಡಿಕೆಯನ್ನು ಕಂಡಿದೆ. ಇದು ಯುವ ಜನತೆಗೆ ಬಿಜೆಪಿಯ ಬದ್ಧತೆಯಾಗಿದೆ ಎಂದರು.

ರಾಜ್ಯದ ನಗರಗಳಲ್ಲಿ ಮೂಲಸೌಕರ್ಯಗಳನ್ನು ಸುಧಾರಿಸಲು, ಸಾರಿಗೆ ವ್ಯವಸ್ಥೆಯನ್ನು ಸುಧಾರಿಸಲು, ಹಳ್ಳಿಗಳು ಮತ್ತು ನಗರಗಳಲ್ಲಿ ಜೀವನದ ಗುಣಮಟ್ಟವನ್ನು ಸುಧಾರಿಸಲು ಮತ್ತು ಹೊಸ ಅವಕಾಶಗಳನ್ನು ಖಚಿತಪಡಿಸಿಕೊಳ್ಳಲು ಬಿಜೆಪಿ ಸರ್ಕಾರವು ಅತ್ಯಂತ ನಿಷ್ಠೆಯಿಂದ ಕೆಲಸ ಮಾಡುತ್ತದೆ.

ಬಂಡವಾಳ ಹೂಡಿಕೆ, ಕೈಗಾರಿಕೆ ಮತ್ತು ಆವಿಷ್ಕಾರದಲ್ಲಿ ಕರ್ನಾಟಕ ಪ್ರಥಮ ಸ್ಥಾನ ಪಡೆಯಬೇಕು. ಶಿಕ್ಷಣ, ಉದ್ಯೋಗ, ಉದ್ಯಮಶೀಲತೆ, ಕೃಷಿಯಲ್ಲಿಯೂ ಕರ್ನಾಟಕವನ್ನು ನಂಬರ್ ಒನ್ ಮಾಡಲು ಬಿಜೆಪಿ ಪ್ರಯತ್ನಿಸುತ್ತಿದೆ. ಕರ್ನಾಟಕದ ಪರಂಪರೆ ಮತ್ತು ಸಾಂಸ್ಕೃತಿಕ ಸಾಮರ್ಥ್ಯ ಪೂಜ್ಯನೀಯವಾದುದು ಎಂದರು.ಇದನ್ನು ಓದಿ –ನಾಳೆ ರಾಜ್ಯ ವಿಧಾನಸಭೆಗೆ ಮತದಾನ : 1.56 ಲಕ್ಷ ಪೊಲೀಸ್ ಸಿಬ್ಬಂದಿಗಳ ಉಸ್ತುವಾರಿ

ಕರ್ನಾಟಕವನ್ನು ನಂಬರ್ ಒನ್ ಮಾಡಲು, ಮೇ 10 ರಂದು ನಿಮ್ಮೆಲ್ಲರನ್ನೂ ಜವಾಬ್ದಾರಿಯುತ ನಾಗರಿಕರಾಗಿ ಮತ ಚಲಾಯಿಸುವಂತೆ ಪ್ರಧಾನಿ ಮೋದಿ ವಿನಂತಿಸಿದರು.

Copyright © All rights reserved Newsnap | Newsever by AF themes.
error: Content is protected !!