ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ಬೆಂಗಳೂರಿನ ಕಂಠೀರವ ಸ್ಟೇಡಿಯಂ ನಡೆಯಲಿರುವ ಅದ್ದೂರಿ ಸಮಾರಂಭದಲ್ಲಿ ಇಂದು ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಜೊತೆ 8 ಮಂದಿ ಶಾಸಕರು ಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಮಧ್ಯರಾತ್ರಿ 2 ಗಂಟೆಯವರೆಗೂ ದೆಹಲಿಯಲ್ಲಿರುವ ಕೆಸಿ ವೇಣುಗೋಪಾಲ್ ನಿವಾಸದಲ್ಲಿ ಸಭೆ ಮೇಲೆ ಸಭೆ ನಡೆದಿದೆ.
ಪ್ರಮುಖ ಖಾತೆಗಳನ್ನು ತಮ್ಮ ಆಪ್ತ ಶಾಸಕರಿಗೆ ನೀಡುವಂತೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಬೇಡಿಕೆ ಇಟ್ಟಿದ್ದಾರೆ.
ಸಚಿವ ಸ್ಥಾನ, ಖಾತೆ ವಿಚಾರವಾಗಿ ಒಮ್ಮತ ಮೂಡಲಿಲ್ಲ. ಹೀಗಾಗಿ ಕೇವಲ 8 ಮಂದಿ ಮಾತ್ರ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮಾಜಿ ಸಚಿವ ಟಿ.ಬಿ.ಜಯಚಂದ್ರ ಹಂಗಾಮಿ ಸ್ಪೀಕರ್ ಆಗಿ ನೇಮಕವಾಗುವ ಸಾಧ್ಯತೆಯಿದೆ.
ಪ್ರಮಾಣವಚನ ಸ್ವೀಕರಿಸುವವರು ಯಾರು?:
ಪರಮೇಶ್ವರ್, ಪ್ರಿಯಾಂಕ ಖರ್ಗೆ, ಜಮೀರ್ ಅಹಮದ್, ಕೆ.ಜೆ.ಜಾರ್ಜ್, ರಾಮಲಿಂಗಾರೆಡ್ಡಿ, ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ, ಕೆ.ಎಚ್.ಮುನಿಯಪ್ಪ ಅವರುಗಳು ಇಂದು ಸಂಪುಟ ಸಚಿವರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ