January 15, 2025

Newsnap Kannada

The World at your finger tips!

WhatsApp Image 2023 05 20 at 5.49.14 PM 1

Three day session from May 22 : RV Deshpande Acting Speaker - CM ಮೇ 22 ರಿಂದ ಮೂರು ದಿನ ಅಧಿವೇಶನ : ಆರ್ ವಿ ದೇಶಪಾಂಡೆ ಹಂಗಾಮಿ ಸ್ಪೀಕರ್ - ಸಿಎಂ

ಮೇ 22 ರಿಂದ ಮೂರು ದಿನ ಅಧಿವೇಶನ : ಆರ್ ವಿ ದೇಶಪಾಂಡೆ ಹಂಗಾಮಿ ಸ್ಪೀಕರ್ – ಸಿಎಂ

Spread the love

ಬೆಂಗಳೂರು: ಮೇ 22 ರಿಂದ ಬುಧವಾರ ಮೇ 24 ರ ವರೆಗೆ ಬೆಂಗಳೂರಿನ ವಿಧಾನ ಸೌಧದಲ್ಲಿ ಮೂರು-ದಿನಗಳ ಕಾಲ ರಾಜ್ಯ ವಿಧಾನಸಭಾ ಅಧಿವೇಶನಕ್ಕೆ ರಾಜ್ಯಪಾಲರ ಅನುಮತಿ ಕೋರಿದ್ದೇವೆ.

ಈ ಅಧಿವೇಶನದಲ್ಲಿ ನೂತನವಾಗಿ ಆಯ್ಕೆಯಾದ ಶಾಸಕರು ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಸದನದ ಅತ್ಯಂತ ಹಿರಿಯ ಸದಸ್ಯ ಆರ್ ವಿ ದೇಶಪಾಂಡೆ ಅವರನ್ನು ಹಂಗಾಮಿ ಸಭಾಧ್ಯಕ್ಷರಾಗಿ ( ಪ್ರೊ ಟರ್ಮ್ ಸ್ಪೀಕರ್ ಆಗಿ ) ಕಾರ್ಯ ನಿರ್ವಹಿಸುವಂತೆ ವಿನಂತಿಸಲಾಗಿದೆ ಸೋಮವಾರವೇ ನೂತನ ಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.ಐದು ಗ್ಯಾರಂಟಿ ಯೋಜನೆಗಳಿಗೆ ತಾತ್ವಿಕ ಒಪ್ಪಿಗೆ- ಶೀಘ್ರವೇ ಅಧಿಕೃತ ಆದೇಶ – ಸಿಎಂ ಸಿದ್ಧರಾಮಯ್ಯ

ಪ್ರ‌ಸ್ತುತ ಸ್ದಗಿತಗೊಂಡಿರುವ ಇಂದಿರಾ ಕ್ಯಾಂಟೀನ್ ಗಳನ್ನು ಸದ್ಯದಲ್ಲೇ ಪುನರಾರಂಭ ಮಾಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದರು.

Copyright © All rights reserved Newsnap | Newsever by AF themes.
error: Content is protected !!