January 29, 2026

Newsnap Kannada

The World at your finger tips!

WhatsApp Image 2023 05 29 at 4.11.28 PM

ಟಿ.ನರಸೀಪುರ ಬಳಿ ಖಾಸಗಿ ಬಸ್- ಇನ್ನೊವಾ ಕಾರಿನ ನಡುವೆ ಭೀಕರ ಅಪಘಾತ, 10 ಮಂದಿ ಸಾವು

Spread the love

ಖಾಸಗಿ ಬಸ್ ಹಾಗೂ ಇನ್ನೊವಾ ಕಾರಿನ ನಡುವೆ ಸಂಭವಿಸಿದ ಬೀಕರ ಅಪಘಾತದಲ್ಲಿ 10 ಮಂದಿ ದುರಂತ ಸಾವು ಕಂಡ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರದ ಬಳಿ ಜರುಗಿದೆ.

ಖಾಸಗಿ ಬಸ್-ಕಾರು ಭೀಕರ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಅಪಘಾತದಿಂದಾಗಿ ಕಾರು ನಜ್ಜುಗುಜ್ಜಾಗಿದೆ. ಅದರಲ್ಲಿ ಇದ್ದಂತ 10 ಮಂದಿ ಸಾವನ್ನಪ್ಪಿದ್ದಾರೆ ಅನೇಕರು ತೀವ್ರವಾಗಿ ಗಾಯಗೊಂಡಿದ್ದಾರೆ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಉಚಿತ ಬಸ್ ಪಾಸ್ – ಮನೆಯಿಂದ 50 K.M ವರೆಗೆ ಮಾತ್ರ ?

ಬಳ್ಳಾರಿ ಮೂಲದವರು ಪ್ರವಾಸಕ್ಕಾಗಿ ಬಂದಿದ್ದವರು ಮೈಸೂರು ಪ್ರವಾಸ ಮುಗಿಸಿಕೊಂಡು ಹೋಗುತ್ತಿರುವಾಗ ಈ ಘಟನೆ ಸಂಭವಿಸಿದೆ.

ಈ ಅಪಘಾತ ಚಾಲಕನ ನಿಯಂತ್ರಣ ತಪ್ಪಿ ನಡೆದಿದೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!