ಬೆಂಗಳೂರು : ಆಗಸ್ಟ್‌ನಿಂದ ಹೆಚ್ಚುವರಿ ಅಕ್ಕಿಯನ್ನು ನೀಡಲಾಗುವುದು ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ.ಹೆಚ್ ಮುನಿಯಪ್ಪ ಪ್ರಕಟಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಮುನಿಯಪ್ಪ ಕೇಂದ್ರ ಸರ್ಕಾರವು ಹೆಚ್ಚುವರಿ ಅಕ್ಕಿ ನೀಡುವುದಕ್ಕೆ ಸಹಕಾರವನ್ನು ನೀಡುತ್ತಿಲ್ಲ, ಬೇರೆ ರಾಜ್ಯಗಳಿಂದ ಅಕ್ಕಿ ಖರೀದಿಗೆ ಮುಂದಾಗಿದೆ, ಈ ನಿಟ್ಟಿನಲ್ಲಿ ಮುಂದಿನ ವಾರದಲ್ಲಿ ದರ ನಿಗದಿಯಾಗಲಿದೆ, ಎಲ್ಲಾ ಪ್ರಕ್ರಿಯೆಗಳು ಮುಗಿದ ಬಳಿಕ ಆಗಸ್ಟ್ ತಿಂಗಳಿನಿಂದ ಅಕ್ಕಿಯನ್ನು ನೀಡಲಾಗುವುದು ಅಂತ ತಿಳಿಸಿದರು.
ಕೇಂದ್ರ ಸರ್ಕಾರದಿಂಧ ಹೆಚ್ಚುವರಿ ಅಕ್ಕಿಯನ್ನು ಪಡೆದುಕೊಳ್ಳುವುದಾಕ್ಕಾಗಿ ಸಿಎಂ ಸೇರಿದಂತೆ ಹಲವು ನಾಯಕರುಗಳು ನವದೆಹಲಿಯಲ್ಲಿ ಬೀಡು ಬಿಟ್ಟಿದ್ದು, ಸಚಿವರಿಗೆ ಹಾಗೂ ಅಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದ್ದಾರೆ. ಆದರೆ ಅವರಿಂಧ ಯಾವುದೇ ಸಕಾರತ್ಮಕ ಪ್ರತಿಕ್ರಿಯೆ ಬಂದಿಲ್ಲ ಎನ್ನಲಾಗಿದೆ. ಈ ನಡುವೆ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ನಾಯಕರುಗಳು ಕಿಡಿಕಾರುತ್ತಿದ್ದು, ಅನ್ನದಲ್ಲಿ ರಾಜಕೀಯ ಮಾಡಬಾರದು ಅಂತ ವಾಗ್ದಾಳಿ ನಡೆಸುತ್ತಿದ್ದಾರೆ.ಎಲ್ಲ ಠಾಣೆಗಳಲ್ಲಿ ಸೈಬರ್ ವಿಭಾಗ
ಕಾಂಗ್ರೆಸ್ ಸರ್ಕಾರ ಚುನಾವಣೆಯಲ್ಲಿ ನೀಡಿದ ಅಶ್ವಾಸನೆಯಂತೆ ಪ್ರತಿ ಕುಟುಂಬಕ್ಕೆ ಕೇಂದ್ರದ ಐದು ಕೆಜಿ ಅಕ್ಕಿ ಜೊತೆಗೆ ರಾಜ್ಯದಿಂದ ಐದುಕೆಜಿ ಒಟ್ಟು ಹತ್ತು ಕೆಜಿ ಅಕ್ಕಿ ನೀಡುವುದಾಗಿ ಹೇಳಿತ್ತು, ಆದರೆ ಈಗ ಅಕ್ಕಿ ನೀಡುವುದರಲ್ಲಿ ವಿಳಂಬವಾಗುತ್ತಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು