January 2, 2025

Newsnap Kannada

The World at your finger tips!

WhatsApp Image 2023 06 26 at 5.02.30 PM

Check bounce case: Jalappa's son jailed ಚೆಕ್ ಬೌನ್ಸ್ ಪ್ರಕರಣ : ಜಾಲಪ್ಪ ಪುತ್ರನಿಗೆ ಜೈಲು

ಚೆಕ್ ಬೌನ್ಸ್ ಪ್ರಕರಣ : ಜಾಲಪ್ಪ ಪುತ್ರನಿಗೆ ಜೈಲು

Spread the love

ಬೆಂಗಳೂರು: ಚೆಕ್‌ ಬೌನ್ಸ್‌ ಪ್ರಕರಣದಲ್ಲಿ ಮಾಜಿ ಸಚಿವ ಆರ್ ಎಲ್ ಜಾಲಪ್ಪ ಪುತ್ರ ನರಸಿಂಹಮೂರ್ತಿಗೆ ಕೋರ್ಟ್‌ ಜೈಲು ಶಿಕ್ಷೆ ವಿಧಿಸಿದೆ.

ಚೆಕ್ ಬೌನ್ಸ್ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನರಸಿಂಹಮೂರ್ತಿಗೆ 6 ತಿಂಗಳು ಜೈಲು ಶಿಕ್ಷೆ, 20 ಲಕ್ಷ ರೂ. ದಂಡ ವಿಧಿಸಿದೆ.

ಪ್ರಕಾಶ್ ಕುಮಾರ್ ಎಂಬುವವರ ಪುತ್ರಿಗೆ ಸೀಟ್ ಕೊಡಿಸಲು ನರಸಿಂಹಮೂರ್ತಿ 45 ಲಕ್ಷ ರೂ. ಹಣವನ್ನು ಪಡೆದಿದ್ದರು. ಮೆಡಿಕಲ್‌ ಸೀಟ್‌ ಸಿಗದ ಕಾರಣ 45 ಲಕ್ಷ ರೂ.ಗೆ ಚೆಕ್‌ ನೀಡಿದ್ದರು. ಆದರೆ ಈ ಚೆಕ್‌ ಬೌನ್ಸ್‌ ಆಗಿತ್ತು. ಮೆಡಿಕಲ್ ಸೀಟ್ ಕೊಡಿಸುವುದಾಗಿ ಹೇಳಿ ವಂಚನೆ ಮಾಡಿದ್ದಕ್ಕೆ ಚೆಕ್‌ ಬೌನ್ಸ್‌ ಪ್ರಕರಣ ದಾಖಲಾಗಿತ್ತು.ಬೆ -ಮೈ ಹೆದ್ದಾರಿಯ ಅಪಘಾತ ತಡೆಗೆ ಉನ್ನತ ಮಟ್ಟದ ತಜ್ಞರ ಸಮಿತಿ – ಸಚಿವ ಚೆಲುವರಾಯಸ್ವಾಮಿ

ಶಿಕ್ಷೆ ಪ್ರಮಾಣವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಕೆಗೆ ಕೋರ್ಟ್‌ 2 ತಿಂಗಳು ಕಾಲಾವಕಾಶ ನೀಡಿದೆ.

Copyright © All rights reserved Newsnap | Newsever by AF themes.
error: Content is protected !!