ಪ್ರಿಯಾಂಕಾ ಉಪೇಂದ್ರ ಮತ್ತೊಂದು ಹಾರರ್ ಥ್ರಿಲ್ಲಿಂಗ್ ಚಿತ್ರಕ್ಕೆ ಸಹಿ ಮಾಡಿದ್ದಾರೆ. ಈ ಚಿತ್ರದಲ್ಲಿ ಪ್ರಿಯಾಮಣಿ ಮತ್ತು ಛಾಯಾ ಸಿಂಗ್ ಸಹ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಹೀಗಾಗಿ, ಕನ್ನಡ ಮೂವರು ನಟಿಯರು ಒಟ್ಟಾಗಿ ಕಾಣಿಸಿಕೊಳ್ಳುತ್ತಿರುವ ಚಿತ್ರ ಇದು.
ಪ್ರಿಯಾಂಕಾ-ಪ್ರಿಯಾಮಣಿ-ಛಾಯಾ ಸಿಂಗ್ ಚಿತ್ರದ ಹೆಸರು ಮತ್ತು ಫಸ್ಟ್ ಲುಕ್ ಬಿಡುಗಡೆಯಾಗಿದೆ. ‘ಖೈಮರಾ’ ಎಂದು ಈ ಚಿತ್ರಕ್ಕೆ ಹೆಸರಿಡಲಾಗಿದ್ದು, ಫಸ್ಟ್ ಲುಕ್ ಪೋಸ್ಟರ್‌ನಲ್ಲಿ ಮೂವರು ನಟಿಯರ ಝಲಕ್ ಸಹ ಅನಾವರಣಗೊಂಡಿದೆ.
ಈ ಚಿತ್ರವನ್ನು ತಮಿಳು ಡೈರೆಕ್ಟರ್ ಗೌತಮ್ ನಿರ್ದೇಶನ ಮಾಡುತ್ತಿದ್ದು, ಇದು ಇವರಿಗೆ ಚೊಚ್ಚಲ ಕನ್ನಡ ಸಿನಿಮಾ. ಗುರು ಕಿರಣ್ ಸಂಗೀತ ನಿರ್ದೇಶನ ನೀಡುತ್ತಿದ್ದು, ವಿಷ್ಣು ರಾಮಕೃಷ್ಣನ್ ಅವರ ಛಾಯಾಗ್ರಹಣ ಇದೆ. ಪಿ ವಿಮಲ್ ಕಥೆ ಬರೆದಿದ್ದು, ಶ್ರೀಕಾಂತ್ ಸಂಕಲನ ಇದೆ.
ಚಿತ್ರದಲ್ಲಿ ಈ ಮೂವರು ನಟಿಯರು ಬೇರೆ ಬೇರೆ ಅವತಾರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಿನಿಮಾ ಚಿತ್ರೀಕರಣ ಬೆಂಗಳೂರು ಮತ್ತು ಕೊಡಗಿನಲ್ಲಿ ನಡೆಸಲು ಸಿನಿಮಾತಂಡ ಪ್ಲಾನ್ ಮಾಡಿದೆ. ಚಿತ್ರದಲ್ಲಿ ಶಿವಾಜಿ ಸೂರತ್ಕಲ್ ಖ್ಯಾತಿಯ ನಟ ವಿನಯ್ ಗೌಡ ಸಹ ನಟಿಸುತ್ತಿದ್ದಾರೆ.
ಈ ಸಿನಿಮಾ ಪ್ರಸ್ತುತ ಕಾಲಘಟ್ಟದ ಜೊತೆಗೆ 1960ರ ದಶಕದ ಕಥೆಯನ್ನೂ ಒಳಗೊಂಡಿದೆ. ಹಾಗಾಗಿ ಪಾತ್ರಗಳು ಎರಡು ಶೇಡ್ ಗಳಲ್ಲಿ ಮೂಡಿಬರಲಿದೆ. ನವೆಂಬರ್ 17ರಿಂದ ಚಿತ್ರೀಕರಣ ಸಹ ಆರಂಭಗೊಳ್ಳಲಿದೆ.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )