ಶ್ರೀರಂಗಪಟ್ಟಣ :
ಬೆಂಗಳೂರು – ಮೈಸೂರು ದಶಪಥ ಹೆದ್ದಾರಿಯ ಗಣಂಗೂರು ಬಳಿ ಇರುವ ಟೋಲ್ ಸಂಗ್ರಹ ಕೇಂದ್ರದಲ್ಲಿ
ಇಂದಿನಿಂದ ವಾಹನಗಳಿಗೆ ಟೋಲ್ ಸಂಗ್ರಹ ಮಾಡಲಾಗುತ್ತಿದೆ, ದಶಪಥ ಹೆದ್ದಾರಿಯ 2ನೇ ಟೋಲ್ ಇದಾಗಿದೆ.
ಟೋಲ್ ಸಂಗ್ರಹಕ್ಕೆ ಭಾರಿ ವಿರೋಧದ ನಡುವೆಯೂ ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವು 2 ಟೋಲ್ನಲ್ಲಿ ಶುಲ್ಕ ಸಂಗ್ರಹಕ್ಕೆ ಆರಂಭ ಮಾಡಿದೆ.
ಮಂಡ್ಯ ಭಾಗದ ಶಾಸಕರು ಹಾಗೂ ಸಾರ್ವಜನಿಕರು ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಇಂದು ಕನ್ನಡಪರ ಸಂಘಟನೆಗಳು ಪ್ರತಿಭಟನೆ ಮಾಡುತ್ತಿವೆ.
ಸವಾರರು ಸೇರಿದಂತೆ ಸ್ಥಳೀಯರು ಕಿಡಿ ಕಾರಿದ್ದಾರೆ. ಈಗ ತಾನೆ ರಾಮನಗರದ ಕಣಮಿಣಕಿ ಟೋಲ್ ಆರಂಭ ಮಾಡಲಾಗಿದೆ. ಈಗಾಗಲೇ ಇಲ್ಲಿ ಶುಲ್ಕ ಪಾವತಿ ಮಾಡಲಾಗುತ್ತಿದೆ. ದಶಪಥ ಹೆದ್ದಾರಿ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಆದ್ರೂ ಒಂದು ಟೋಲ್ನ ಶುಲ್ಕ ಹೊರೆ ಬೀಳುತ್ತಿದೆ. ಈ ಹೊತ್ತಿನಲ್ಲಿ 2 ಟೋಲ್ ಶುರು ಮಾಡಿ ವಸೂಲಿ ಮಾಡುವುದು ಸರಿಯಲ್ಲ ಎಂದು ಸವಾರರು ಹೇಳುತ್ತಿದ್ದಾರೆ. ಹೀಗಾಗಿ ಇಂದು ಕನ್ನಡಪರ ಸಂಘಟನೆಗಳು ಪ್ರತಿಭಟನೆಗೆ ಮುಂದಾಗಿವೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ