ಬೆಂಗಳೂರು : ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪದಲ್ಲಿ ಲೋಕಾಯುಕ್ತ ಪೊಲೀಸರ ವಶದಲ್ಲಿರುವ ಕೆ.ಆರ್. ಪುರಂ ತಹಶೀಲ್ದಾರ್ ಅಜಿತ್ ರೈ ಅವರನ್ನು ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ಅನುಕಂಪದ ಆಧಾರದಲ್ಲಿ ಕಂದಾಯ ಇಲಾಖೆಯಲ್ಲಿ ಕೆಲಸ ಪಡೆದುಕೊಂಡಿದ್ದ ಅಜಿತ್ ರೈ ನಂತರ ಹಲವು ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಬಡ್ತಿ ಪಡೆದಿದ್ದರು.
ಪ್ರಸ್ತುತ ಕೆ.ಆರ್. ಪುರಂನಲ್ಲಿ ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಆದಾಯಕ್ಕಿಂತ ಶೇ 69ರಷ್ಟು ಹೆಚ್ಚುವರಿ ಆಸ್ತಿ ಹೊಂದಿರುವ ಆರೋಪದಲ್ಲಿ ಅಜಿತ್ ರೈ ಅಮಾನತು ಮಾಡಲಾಗಿದೆ
ಲೋಕಾಯುಕ್ತ ಪೋಲಿಸರ ದಾಳಿ ವೇಳೆ 40 ಲಕ್ಷ ರು ನಗದು, ಕೋಟ್ಯಂತರ ಮೌಲ್ಯದ ಭೂ ದಾಖಲಾತಿ ಪತ್ರಗಳು, ದುಬಾರಿ ಬೆಲೆಯ ಕಾರು ಖರೀದಿಸಿದ ರಶೀದಿಗಳು, ದೇಶ-ವಿದೇಶಿ ಬ್ರ್ಯಾಂಡ್‌ನ ಮದ್ಯ ಪತ್ತೆಯಾಗಿತ್ತು.ಶೇ 70 ರಷ್ಟು ಜನಪ್ರತಿನಿಧಿಗಳಿಗೆ ಆಸ್ತಿ ವಿವರ ಸಲ್ಲಿಸಲು ಆಸಕ್ತಿ ಇಲ್ಲ – ಲೋಕಾಯುಕ್ತ
ಸತತ 30 ಗಂಟೆಗಳ ಪರಿಶೀಲನೆ ವೇಳೆ ಅಕ್ರಮ ಆಸ್ತಿ ಗಳಿಕೆ ಮಾಡಿರುವುದು ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಅಜಿತ್ ರೈನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ