January 15, 2025

Newsnap Kannada

The World at your finger tips!

WhatsApp Image 2023 07 04 at 6.30.56 PM

ಬೆಂ- ಮೈ ದಶಪಥ ಹೆದ್ದಾರಿ: ಅಪಘಾತ ಪ್ರಕರಣ ತಗ್ಗಿಸಲು ಟ್ರಾಫಿಕ್ ಇನ್ವರ್ ಸೆಪ್ಟರ್ ಗಳ ಅಳವಡಿಕೆ

Spread the love

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಪ್ಪಿಸಲು ಪೊಲೀಸ್‌ ಇಲಾಖೆ ಕ್ರಮಕ್ಕೆ ಮುಂದಾಗಿದೆ. ಎಕ್ಸ್‌ಪ್ರೆಸ್‌ವೇನಲ್ಲಿ ಟ್ರಾಫಿಕ್‌ ಪೊಲೀಸ್‌ ಇನ್ಟರ್‌ಸೆಪ್ಟರ್‌ಗಳನ್ನ ಅಳವಡಿಸಲಾಗಿದೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಅತೀ ವೇಗವಾಗಿ ಚಲಿಸುವ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಲು ರಾಡಾರ್‌ ಸ್ಪೀಡ್‌ ಗನ್‌ಗಳನ್ನ ಬಳಸಲಾಗಿದೆ ಎಂದು ಎಡಿಜಿಪಿ ಅಲೋಕ್‌ ಕುಮಾರ್‌ ತಿಳಿಸಿದ್ದಾರೆ.

ಎಕ್ಸ್‌ಪ್ರೆಸ್‌ವೇ ಯಲ್ಲಿ ಅಪಘಾತಗಳು ಹೆಚ್ಚಾಗಿವೆ. ಅಪಘಾತದಲ್ಲಿ ಅನೇಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಎಡಿಜಿಪಿ ಅಲೋಕ್‌ ಕುಮಾರ್‌ ಅವರು ಎಕ್ಸ್‌ಪ್ರೆಸ್‌ವೇನಲ್ಲಿ ಪರಿಶೀಲನೆ ನಡೆಸಿದ್ದರು.

ಹೆದ್ದಾರಿಯಲ್ಲಿ ಸಂಚರಿಸುವಾಗ ಕಠಿಣ ಕ್ರಮಗಳನ್ನು ಕೈಗೊಳ್ಳುವುದಾಗಿ ವಾಹನ ಸವಾರರಿಗೆ ಎಚ್ಚರಿಕೆ ಕೊಟ್ಟಿದ್ದರು. ವೇಗವಾಗಿ ವಾಹನ ಚಲಾಯಿಸಿದವರ ಡಿಎಲ್‌ ರದ್ದು ಮಾಡಲಾಗುವುದು ಎಂದು ಸಹ ಎಚ್ಚರಿಸಿದ್ದರು.

ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ಹೀಗಾಗಿ ಎಕ್‌ಪ್ರೆಸ್‌ವೇನಲ್ಲಿ ವಾಹನಗಳ ವೇಗದ ಚಾಲನೆ ತಪ್ಪಿಸಲು ಟ್ರಾಫಿಕ್‌ ಪೊಲೀಸ್‌ ಇನ್ಟರ್‌ಸೆಪ್ಟರ್‌ಗಳನ್ನ ಬಳಸಿದ್ದಾರೆ.

ದಂಡ ಕಟ್ಟುವ ಹಣ ಉಳಿಸಿಕೊಳ್ಳಬೇಕು ಎನ್ನುವ ಕಾರಣಕ್ಕಲ್ಲ, ಜೀವ ಉಳಿಸುವುದಕ್ಕಾಗಿ ಸಂಚಾರ ನಿಯಮ ಪಾಲಿಸಿ ಎಂದು ಜನರಿಗೆ ಕಿವಿಮಾತು ಹೇಳಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!