ಸಂಪತ್ ರಾಜ್ ಗೆ ಜಾಮೀನು ರಹಿತ ಬಂಧನಕ್ಕೆ ಆದೇಶ – ವಿದೇಶಕ್ಕೆ ಪರಾರಿ?

Team Newsnap
1 Min Read

ನಗರದ ಡಿಜೆ ಹಳ್ಳಿ ಹಾಗೂ ಕೆಜಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಯಾಗಿದೆ.

ಕೆಲ ದಿನಗಳ ಹಿಂದೆ ಸಿಸಿಬಿ ವಿಚಾರಣೆಗೆ ಹಾಜರಾಗುವಂತೆ ಸಂಪತ್ ರಾಜ್ ಗೆ ನೋಟೀಸ್ ಜಾರಿ ಮಾಡಲಾಗಿತ್ತು. ಆದರೆ ಅನಾರೋಗ್ಯದ ನೆಪ ಹೂಡಿದ್ದ ಸಂಪತ್ ರಾಜ್ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಸಂಪತ್ ರಾಜ್ ಸಿಸಿಬಿ ಕಣ್ಣು ತಪ್ಪಿಸಿ ಆಸ್ಪತ್ರೆಯಿಂದ ಪರಾರಿಯಾಗಿದ್ದರು.

ಈ ಹಿನ್ನೆಲೆಯಲ್ಲಿ ಇದೀಗ ಸಂಪತ್ ರಾಜ್ ಗೆ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಜಾರಿ ಮಾಡಿದೆ. ಸಂಪತ್ ರಾಜ್ ಬಂಧನದಿಂದ ತಪ್ಪಿಸಿಕೊಳ್ಳಲು ವಿದೇಶಕ್ಕೆ ಪರಾರಿಯಾಗಿರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ವಾರೆಂಟ್ ಜಾರಿಮಾಡಿರುವ ಸಿಸಿಬಿ ಹುಡುಕಾಟ ಮುಂದುವರಿಸಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ, “ಡಿಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ನಾನು ಯಾರಿಗೂ ಅನ್ಯಾಯವಾಗಲು ಬಿಡುವುದಿಲ್ಲ. ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಪೊಲೀಸರೇ ಬಂಧಿಸುತ್ತಾರೆ. ಸಂಪತ್ ರಾಜ್ ಜವಾಬ್ದಾರಿಯುತ ನಾಗರೀಕನಾಗಿ ಬಂದು ಶರಣಾಗಬೇಕು. ಅವರಿಂದ ಸಾಕಷ್ಟು ಜನರಿಗೆ ತೊಂದರೆ ಉಂಟಾಗಿದೆ, ಸಾರ್ವಜನಿಕರ ಆಸ್ತಿಪಾಸ್ತಿ ಹಾಳಾಗಿದೆ. ಅವರು ವಿದೇಶಕ್ಕೆ ಪರಾರಿಯಾಗದಂತೆ ಲುಕೌಟ್ ನೋಟೀಸ್ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ.

Share This Article
Leave a comment