ಬೆಂಗಳೂರು: ಉಗ್ರರ ಜೊತೆ ಸಂಪರ್ಕ ಸಾಧಿಸಿ ಬೆಂಗಳೂರಿನಲ್ಲಿ ಸ್ಫೋಟಕ್ಕೆ ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಕೇಂದ್ರ ಗುಪ್ತಚರ ಇಲಾಖೆಯ ಮಾಹಿತಿಯ ಮೇರೆಗೆ ಸಿಸಿಬಿ ಬಂಧಿಸಿದೆ.
ಸುಹೇಲ್ , ಉಮರ್, ತಬ್ರೇಜ್ , ಮುದಾಸಿರ್ , ಫೈಜಲ್ ರಬ್ಬಾನಿಯನ್ನು ಬಂಧಿಸಲಾಗಿದೆ.
ತಂಡದ ನಾಯಕ ಜುನೈದ್ ನಾಪತ್ತೆಯಾಗಿದ್ದಾನೆ. ಶಂಕಿತ ಉಗ್ರರೆಲ್ಲರೂ ಬೆಂಗಳೂರಿನ ನಿವಾಸಿಗಳು. ಜನ ಸಂದಣಿ ಇರುವ ಪ್ರದೇಶದಲ್ಲಿ ಬ್ಲ್ಯಾಸ್ಟ್ ನಡೆಸಲು ಇವರು ತಯಾರಿ ನಡೆಸಿದ್ದರು.
ಎನ್‌ಐಎ ಮತ್ತು ಸಿಸಿಬಿ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಐವರನ್ನು ಬಂಧಿಸಿದೆ.
ಶಂಕಿತರ ಮೇಲೆ ಹೆಬ್ಬಾಳ ಠಾಣೆಯಲ್ಲಿ ಸಿಸಿಬಿ ಪ್ರಕರಣ ದಾಖಲಿಸಿದೆ. ವಶಕ್ಕೆ ಪಡೆದ ಶಂಕಿತರನ್ನು ಆಡುಗೋಡಿಯ ಟೆಕ್ನಿಕಲ್ ಸೆಲ್‌ನಲ್ಲಿ ವಿಚಾರಣೆ ನಡೆಸುತ್ತಿದೆ.
ಆರ್‌ಟಿ ನಗರದ ಸುಲ್ತಾಲ್ ಪಾಳ್ಯದ ಸೊಹೈಲ್ ಮನೆ ಬಳಿ ಶಂಕಿತರು ಸಭೆ ನಡೆಸುತ್ತಿದ್ದಾಗ ಐವರನ್ನು ಬಂಧಿಸಲಾಗಿದೆ.ಇಂದು ಸಂಜೆಯಿಂದಲೇ ಗೃಹಲಕ್ಷ್ಮಿ ಯೋಜನೆಯ ನೋಂದಣಿ ಕಾರ್ಯ ಆರಂಭ : ಸಮಗ್ರ ಮಾಹಿತಿ ಇಲ್ಲಿದೆ
ಎರಡು ಸ್ಯಾಟಲೈಟ್ ಫೋನ್, 7 ಕಂಟ್ರಿ ಮೇಡ್ ಪಿಸ್ತೂಲ್ , 42 ಸಜೀವ ಗುಂಡುಗಳು ಬಂಧಿತರಿಂದ ವಶ ಪಡಿಸಿಕೊಳ್ಳಲಾಗಿದೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ