ಆದಾಯಕ್ಕೂ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ಗೆ ಸುಪ್ರೀಂಕೋರ್ಟ್ನ್ ಬಿಗ್ ರಿಲೀಫ್ ನೀಡಿದೆ
ಡಿಕೆ ಶಿವಕುಮಾರ್ ವಿರುದ್ಧದ ತನಿಖೆಗೆ ತಡೆಯಾಜ್ಞೆ ತೆರವು ಕೋರಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ಡಿಕೆ ಶಿವಕುಮಾರ್ ವಿರುದ್ಧದ ಆದಾಯಕ್ಕೂ ಮೀರಿ ಆಸ್ತಿಗಳಿಕೆ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು.
ಈ ಆದೇಶ ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿತ್ತು. ಆದರೆ, ಸುಪ್ರೀಂಕೋರ್ಟ್ ಇಂದು ಸಿಬಿಐ ಅರ್ಜಿಯನ್ನು ವಜಾ ಮಾಡಿ ಆದೇಶ ಹೊರಡಿಸಿದೆ. ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶ ಸಾಧ್ಯವಿಲ್ಲ ಎಂದು ಹೇಳಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದೆ.
2013ರಿಂದ 2018ರ ವರೆಗಿನ ಆದಾಯಗಳಿಕೆ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ ಇದಕ್ಕೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಸಿಬಿಐ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು.ಸಿದ್ದಗಂಗಾ ಮಠ – 5 ಕೋಟಿ ಮೌಲ್ಯದ ಥೀಮ್ ಪಾರ್ಕ್ ನಿರ್ಮಾಣ
ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ ಕಲಂ 13(2), 13(1)ಇ ಅಡಿಯಲ್ಲಿ ಸಿಬಿಐ 2020ರ ಅಕ್ಟೋಬರ್ 3ರಂದು ಕ್ರಿಮಿನಲ್ ಪ್ರಕರಣ ದಾಖಲಿಸಿತ್ತು. ಅಲ್ಲದೇ 2013ರಿಂದ 2018ರ ವರೆಗಿನ ಆದಾಯಗಳಿಕೆ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದ್ದು ಇದನ್ನು ಪ್ರಶ್ನಿಸಿ ಡಿಕೆ ಶಿವಕುಮಾರ್ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ತನಿಖೆಗೆ ಮಧ್ಯಂತರ ತಡೆ ತಡೆಯಾಜ್ಞೆ ನೀಡಿತ್ತು. ಇದೇ ಅದೇ ತಡೆಯಾಜ್ಞೆ ವಿಸ್ತರಣೆಯಾಗುತ್ತಾ ಬಂದಿದ್ದು, ಇದನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.
- ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
- ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
- ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
- 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ: ಸಚಿವ ಚಲುವರಾಯಸ್ವಾಮಿ
- ಸಿಎಂ ಪತ್ನಿಯ ನಿವೇಶನ ಹಗರಣ: ದೂರು ಹಿಂಪಡೆಯಲು ಆಮಿಷ ನೀಡಿದ ಆರೋಪ
- ಅಂತಾರಾಷ್ಟ್ರೀಯ ಕ್ರಿಕೆಟ್ಗೆ ರವಿಚಂದ್ರನ್ ಅಶ್ವಿನ್ ದಿಢೀರ್ ವಿದಾಯ
More Stories
ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ