December 19, 2024

Newsnap Kannada

The World at your finger tips!

dasara,mysuru,navaratri

ಮೈಸೂರು ದಸರಾದಲ್ಲಿ ಕಾಂಗ್ರೆಸ್ ಗ್ಯಾರೆಂಟಿ ಸ್ತಬ್ಧಚಿತ್ರ! – ಏರ್ ಶೋ ಸಾಧ್ಯತೆ

Spread the love

ಮೈಸೂರು :

ಈ ಬಾರಿಯ ಮೈಸೂರು ದಸರಾದಲ್ಲಿ ಕಾಂಗ್ರೆಸ್ ಪಕ್ಷದ ಐದು ಗ್ಯಾರೆಂಟಿಗಳನ್ನು ಬಿಂಬಿಸುವ ಸ್ತಬ್ಧಚಿತ್ರ ಅನಾವರಣಗೊಳ್ಳಲಿದೆ.

ಜೊತೆಗೆ ಏರ್ ಶೋ ಹಮ್ಮಿಕೊಳ್ಳುವ ಉದ್ದೇಶವೂ ಇದೆ ಈ ಕುರಿತು ಕೇಂದ್ರ ರಕ್ಷಣಾ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಿತಿ ಸಭೆ ಹಮ್ಮಿಕೊಳ್ಳಲಾಗಿತ್ತು.

ಅ. 15 ರಂದು ಬೆಳಿಗ್ಗೆ 10.15 ರಿಂದ 10.30 ಕ್ಕೆ ಸಲ್ಲುವ ಮಹೂರ್ತದಲ್ಲಿ ಉದ್ಘಾಟನೆ ನೆರವೇರಲಿದ್ದು, ಪಂಜಿನ ಕವಾಯತು ವಿಜಯದಶಮಿ ದಿನದಂದು ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು, ಚಲನಚಿತ್ರೋತ್ಸವ, ರೈತರ ದಸರಾ, ಯುವ ದಸರಾ ಎಲ್ಲವನ್ನು ವ್ಯವಸ್ಥಿತವಾಗಿ ಆಚರಿಸಲು ತೀರ್ಮಾನಿಸಲಾಯಿತು.

ಸ್ತಬ್ಧಚಿತ್ರಗಳ ಆಯ್ಕೆ ಮಾಡುವ ಸಂದರ್ಭದಲ್ಲಿ ರಾಜ್ಯದ ಪರಂಪರೆ, ಜಿಲ್ಲಾ ವೈಶಿಷ್ಟ್ಯತೆ ಗಳ ಜೊತೆಗೆ 5 ಗ್ಯಾರಂಟಿಗಳನ್ನು ಬಿಂಬಿಸಿ ಜನರಿಗೆ ಸಂದೇಶವನ್ನು ನೀಡುವಂತಿರಬೇಕು ಎಂದು ಸಿಎಂ ಅಧಿಕಾರಿಗಳಿಗೆ ಸೂಚಿಸಿದರು.

ಎಲ್ಲಾ ಪ್ರಕಾರಗಳಲ್ಲಿ ರಾಜ್ಯದ ಉತ್ತಮ ಕಲಾವಿದರಿದ್ದಾರೆ. ಅವರಿಗೆ ಹೆಚ್ಚಿನ ಒತ್ತು ನೀಡಬೇಕು ಹಾಗೂ ಕಾಲೇಜು ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ಯುವ ದಸರಾದಲ್ಲಿ ವೇದಿಕೆ ಕಲ್ಪಿಸಿ, ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕೆಂದು ನಿರ್ಧರಿಸಲಾಗಿದೆ.

ದಸರಾ ನೋಡಲು ಆಗಮಿಸುವ ಪ್ರವಾಸಿಗರಿಗೆ ಅಗತ್ಯ ಮೂಲಸೌಕಾರ್ಯಗಳನ್ನು ಒದಗಿಸಬೇಕು. ಯಾವುದೇ ತೊಂದರೆಗಳಾಗದಂತೆ ಕ್ರಮ ವಹಿಸಬೇಕೆಂದು ಸಿಎಂ ತಿಳಿಸಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!