ರಾಮನಗರ: ಬೆಂಗಳೂರು – ಮೈಸೂರು ದಶಪಥ ಹೆದ್ದಾರಿಯಲ್ಲಿ ಮಂಗಳವಾರದಿಂದ ದ್ವಿಚಕ್ರ, ತ್ರಿಚಕ್ರ ವಾಹನಗಳ ನಿಷೇಧ ಹಿನ್ನೆಲೆ ಎಕ್ಸ್‌ಪ್ರೆಸ್ ಹೈವೇಯಲ್ಲಿ ಪೊಲೀಸರ ತಪಾಸಣೆ ಮುಂದುವರೆದಿದೆ.
ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿ ಹಾಗೂ ಪೊಲೀಸರು ಜಂಟಿಯಾಗಿ ವಾಹನಗಳ ಡೈವರ್ಟ್ ಮಾಡುವ ಕೆಲಸ ಮಾಡುತ್ತಿದ್ದಾರೆ.
ಹೆದ್ದಾರಿಯಲ್ಲಿ ಬೈಕ್ ಸಂಚಾರ ಬಹುತೇಕ ವಿರಳವಾಗಿದೆ. ಬೈಕ್, ಆಟೋ, ಟ್ರಾಕ್ಟರ್‌ಗಳು ಸರ್ವಿಸ್ ರಸ್ತೆಯಲ್ಲೇ ಸಂಚಾರ ಮಾಡುತ್ತಿವೆ.
ಹೆದ್ದಾರಿಯಲ್ಲಿ ನಿಯಮ ಉಲ್ಲಂಘನೆ ಮಾಡುತ್ತಿರುವ ವಾಹನಗಳಿಗೆ ಸ್ಥಳದಲ್ಲೇ ದಂಡ ವಿಧಿಸಲಾಗುತ್ತಿದೆ.
ರಾಮನಗರದ ಸಂಘಬಸವನ ದೊಡ್ಡಿ ಪ್ರವೇಶದ ಬಳಿ ಪೊಲೀಸರು ತಪಾಸಣೆ ನಡೆಸಿ ಹಲವು ಬೈಕ್ ಸವಾರರಿಗೆ ದಂಡ ವಿಧಿಸಿದ್ದಾರೆ.
ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿ ಕೂಡಾ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಬೆಳಗ್ಗೆ 8ರಿಂದ 11ಗಂಟೆಯವರೆಗೆ ಬೈಕ್ ಸವಾರರಿಗೆ ಜಾಗೃತಿ ಮೂಡಿಸಿದ ಪೊಲೀಸರು ಬಳಿಕ ದಂಡಾಸ್ತ್ರ ಆರಂಭಿಸಿದ್ದಾರೆ.KRS ನಲ್ಲಿ 113 ಅಡಿ ಗಡಿದಾಟಿದ ನೀರು : 6 ಸಾವಿರ ಕ್ಯುಸೆಕ್ ಒಳಹರಿವು – ಕಬಿನಿ ಭರ್ತಿಗೆ 1 ಅಡಿ ಬಾಕಿ
ಹೈವೇಯಲ್ಲಿ ಓವರ್ ಸ್ಪೀಡ್, ಲೇನ್ ಡಿಸಿಪ್ಲೀನ್ ಉಲ್ಲಂಘನೆ ಮಾಡಿದವರಿಗೂ ದಂಡ ಹಾಕಲಾಗಿದೆ. ಸ್ಥಳಕ್ಕೆ ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
- ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
- ಮುದ್ದುಲಕ್ಷ್ಮಿ ಸೀರಿಯಲ್ ನಟ ಚರಿತ್ ಬಾಳಪ್ಪ ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನ
- ನಾಳೆ ರಾಜ್’ಘಾಟ್ನಲ್ಲಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಂತ್ಯಸಂಸ್ಕಾರ
- ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ: ಬೆಂಗಳೂರು ಸೇರಿ 21 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
- ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶ
More Stories
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶ
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ