ಬೆಂಗಳೂರು: ಮರುಬಳಕೆ ಮಾಡಬಹುದಾದ ಎಲೆಕ್ಟ್ರಿಕ್ ಬ್ಯಾಟರಿಗಳನ್ನು ತಯಾರಿಸುವ ಅಂತಾರಾಷ್ಟ್ರೀಯ ಸಂಸ್ಥೆಯೊಂದಿಗೆ ರಾಜ್ಯ ಸರ್ಕಾರ 8,000 ಕೋಟಿ ರೂ. ಹೂಡಿಕೆ ಒಡಂಬಡಿಕೆಗೆ ಮಂಗಳವಾರ ಸಹಿ ಹಾಕಿದೆ.
ಕೈಗಾರಿಕಾ ಸಚಿವ ಎಂ ಬಿ ಪಾಟೀಲ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸರಕಾರದ ಪರವಾಗಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ಐಬಿಸಿ ಇಂಡಿಯಾ ಪರವಾಗಿ ಅದರ ಭಾರತದ ವ್ಯವಹಾರಗಳ ಮುಖ್ಯಸ್ಥ ವೆಂಕಟೇಶ ವಲ್ಲೂರಿ ಸಹಿ ಹಾಕಿದರು.
ಮರುಬಳಕೆ ಮಾಡಬಹುದಾದಂಥ ಲಿಥಿಯಾನ್ ಬ್ಯಾಟರಿಗಳ ಉತ್ಪಾದನೆ ಮುಂದಿನ ಒಂದು ವರ್ಷದಲ್ಲಿ ಪ್ರಾರಂಭವಾಗಲಿದ್ದು, ಸರ್ಕಾರ ಕಾರ್ಖಾನೆ ಸ್ಥಾಪನೆಗೆ ಗ್ರಾಮಾಂತರ ಜಿಲ್ಲೆಯಲ್ಲಿ 100 ಎಕರೆ ಜಮೀನು ನೀಡಲಿದೆ.
ಇದು ರಾಜ್ಯದಲ್ಲಿ ಇಂತಹ ಎರಡನೇ ಘಟಕವಾಗಿದ್ದು, ಈ ಕ್ಷೇತ್ರದಲ್ಲಿ ರಾಜ್ಯವು ಇಡೀ ದೇಶಕ್ಕೇ ಅಗ್ರಸ್ಥಾನ ಪಡೆಯಲಿದೆ.ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ – ಹತ್ತು ಲಕ್ಷ ಹೂವಿನಲ್ಲಿ ಎದ್ದುನಿಲ್ಲಲಿದೆ ವಿಧಾನಸೌಧ
ಕಾರ್ಯಕ್ರಮದಲ್ಲಿ ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಐಬಿಸಿ ಸಂಸ್ಥಾಪಕ ಮತ್ತು ಸಿಇಒ ಡಾ.ಪ್ರಿಯದರ್ಶಿ ಪಾಂಡಾ, ಕಂಪನಿಯ ಸಿಒಒ ಶಶಿ ಕುಪ್ಪಣ್ಣಗಾರಿ ಉಪಸ್ಥಿತರಿದ್ದರು.
- Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
- ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ
- ಕಾಪರ್ ಏಜ್ ಇನ್ಸ್ಟಿಟ್ಯೂಟ್ ಮಾಲೀಕ ಶರತ್ ಆತ್ಮಹತ್ಯೆ: ಕಾರಣ ನಿಗೂಢ
- 104ರನ್ಗೆ ಆಸ್ಟ್ರೇಲಿಯಾ ಆಲೌಟ್ ,ಬುಮ್ರಾಗೆ 5 ವಿಕೆಟ್
More Stories
Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ