December 26, 2024

Newsnap Kannada

The World at your finger tips!

WhatsApp Image 2023 08 02 at 7.55.37 PM

ಕಾಂಗ್ರೆಸ್ ನಾಯಕರಿಗೆ ಭ್ರಷ್ಟಾಚಾರದ ಆರೋಪಗಳ ಬಗ್ಗೆ ಎಚ್ಚರಿಕೆ : ರಾಹುಲ್‌ ಗಾಂಧಿ

Spread the love

ಸಚಿವರಿಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಕಪ್ಪುಚುಕ್ಕೆ ಬಾರದಂತೆ ನೋಡಿಕೊಳ್ಳುವಂತೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಭ್ರಷ್ಟಾಚಾರ ಆರೋಪ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬರಬಾರದು ಪಾರದರ್ಶಕ ಆಡಳಿತ ನೀಡಬೇಕು, ಹೈಕಮಾಂಡ್ ನಿಗಾ ವಹಿಸಲಿದೆ, ಭ್ರಷ್ಟಾಚಾರ ವಿಚಾರದಲ್ಲಿ ಬಿಜೆಪಿ ವಿರುದ್ಧ ಹೋರಾಟ ಮಾಡಿದ್ದೇವೆ.

ಇಂದು ನವದೆಹಲಿಯಲ್ಲಿ ಕಾಂಗ್ರೆಸ್ ನಾಯಕರ ಮಹತ್ವದ ಸಭೆಯನ್ನು ರಾಹುಲ್ ಗಾಂಧಿ ನಡೆಸಿದರು. ಈ ಸಭೆಯಲ್ಲಿ ಸರ್ಕಾರ ರಚನೆಯಾಗಿ ಎರಡು ತಿಂಗಳಲ್ಲೇ ಗ್ಯಾರಂಟಿ ಯೋಜನೆಗಳು ಜಾರಿ ಆಗಿರುವುದು, ಪ್ರತೀ ದಿನ ಈ ಯೋಜನೆಗಳ ಲಾಭ ಕರ್ನಾಟಕದ ಮಧ್ಯಮ ವರ್ಗ ಮತ್ತು ಬಡವರಿಗೆ ತಲುಪುತ್ತಿದೆ. ಈ ಗ್ಯಾರಂಟಿಗಳು ಪ್ರತಿಯೊಬ್ಬ ಫಲಾನುಭವಿಗೂ ಕಡ್ಡಾಯವಾಗಿ ತಲುಪುವಂತೆ ಎಫೆಕ್ಟೀವ್ ಆಗಿ ಬಳಸಿ ಎಂಬುದಾಗಿ ಸೂಚಿಸಿದ್ದಾರೆ .

ಎರಡು ತಿಂಗಳುಗಳಲ್ಲೇ ಗ್ಯಾರಂಟಿ ಯೋಜನೆಗಳು ಎಲ್ಲಾ ವರ್ಗದ ಜನರಿಗೆ ಸ್ಪಂದಿಸಿರುವುದರ ಬಗ್ಗೆ ನಮಗೆ ವರದಿ ಬಂದಿದೆ. ಐದು ಗ್ಯಾರಂಟಿಗಳು ದೇಶದ ಆರ್ಥಿಕ ನೀತಿಯ ಗೇಮ್ ಚೇಂಜ್ ಆಗುತ್ತವೆ. ಈ ಗ್ಯಾರಂಟಿ ಯೋಜನೆಗಳ ಯಶಸ್ಸು ಬರಲಿರುವ ಲೋಕಸಭಾ ಚುನಾವಣೆಗೆ ಭದ್ರ ಬುನಾದಿ ಆಗಬೇಕು ಎಂದಿದ್ದಾರೆ.

ಬೇರೆ ಬೇರೆ ರಾಜ್ಯ ಸರ್ಕಾರಗಳು ಕರ್ನಾಟಕದ ಕಡೆಗೆ ನೋಡುತ್ತಿವೆ. ಸಾಲದ ಹೊರೆ ಆಗದಂತೆ, ಇರುವ ಅವಕಾಶದಲ್ಲೇ ಐದು ಗ್ಯಾರಂಟಿಗಳಿಗೆ ಹಣ ಹೊಂದಿಸುವ ಮೂಲಕ ಕರ್ನಾಟಕ ದೇಶಕ್ಕೆ ಒಂದು ಎಕನಾಮಿಕ್ ಮಾಡೆಲ್ ಅನ್ನು ರೂಪಿಸಿ ಕೊಟ್ಟಿದೆ.

ಕರ್ನಾಟಕದ 22 ರಿಂದ 24 ಲೋಕಸಭಾ ಸ್ಥಾನಗಳಲ್ಲಿ ಗೆಲ್ಲುವ ಅವಕಾಶಗಳಿವೆ. ಕರ್ನಾಟಕದಲ್ಲಿ ನಡೆದ I.N.D.I.A ಅತ್ಯಂತ ಯಶಸ್ವಿಯಾಗಿದೆ.‌ ಹೀಗಾಗಿ ರಾಷ್ಟ್ರ ಮಟ್ಟದಲ್ಲಿ ಬಹಳ ದೊಡ್ಡ ಬದಲಾವಣೆಗೆ ಕರ್ನಾಟಕ ದೊಡ್ಡ ಮಟ್ಟದಲ್ಲೇ ಕಾಂಟ್ರಿಬ್ಯೂಟ್ ಮಾಡುತ್ತಿದೆ. ನಿಮ್ಮ ಅವಧಿಯಲ್ಲಿ ಆಗಿರುವ ಐದು ಗ್ಯಾರಂಟಿಗಳ ಯಶಸ್ಸಿನ ಪ್ರತಿಫಲ ಲೋಕಸಭಾ ಚುನಾವಣೆಯಲ್ಲಿ ಪ್ರತಿಫಲಿಸಬೇಕು ಎಂದು ಹೇಳಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!