ಸಂಸದೆ ಸುಮಲತಾ ಕಾರ್ಯ ವೈಖರಿ ಬಗ್ಗೆ ಮೈಸೂರು ಸಂಸದ ಪ್ರತಾಪ್ ಸಿಂಹ ಟೀಕಿಸಿ ಮಾತನಾಡಿರುವ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಬೆಂಗಳೂರಿಗೆ ತೆರಳುವಾಗ ತಾಲ್ಲೂಕಿನ ಯಲಿಯೂರು ಗೇಟ್ ಬಳಿ ಬೆಂಗಳೂರು–ಮೈಸೂರು ದಶಪಥ ಕಾಮಗಾರಿಯ ಬಗ್ಗೆ ಅಧಿಕಾರಿಯೊಬ್ಬರ ಜೊತೆ ಅವರು ಫೋನ್‌ನಲ್ಲಿ ಮಾತನಾಡಿದ್ದಾರೆ.

‘ದೇವೇಗೌಡರ ಕುಟುಂಬವನ್ನು ಸೋಲಿಸುವ ಉದ್ದೇಶದಿಂದ ಸುಮಲತಾ ಅವರನ್ನು ಗೆಲ್ಲಿಸಿದ್ದಾರೆ. ಅವರು ಯಾವ ಕೆಲಸ ಮಾಡುವುದಕ್ಕೂ ಬಿಡುವುದಿಲ್ಲ. ಮಂಡ್ಯದ ಯಾವುದೇ ಕೆಲಸ ಇದ್ದರೂ ನನಗೆ ಹೇಳಿ. ಆ ಯಮ್ಮ ಏನೂ ಕೆಲಸ ಮಾಡುವುದಿಲ್ಲ’ ಎಂದು ಫೋನ್ ನಲ್ಲಿ ಮಾತನಾಡಿದ್ದಾರೆ.
ಪ್ರತಾಪ್ ಸಿಂಹ ಬೆಂಗಳೂರು- ಮೈಸೂರು ದಶಪಥ ಕಾಮಗಾರಿಯ ಯೋಜನಾಧಿಕಾರಿ ಜೊತೆ ಮಾತನಾಡಿದ್ದಾರೆ. ಸುಮಲತಾ ವಿರುದ್ಧ ಅಧಿಕಾರಿ ದೂರು ಹೇಳಿದಾಗ ಪ್ರತಾಪ್ ಸಿಂಹ, ಸುಮಲತಾ ವಿರುದ್ಧವೇ ಮಾತನಾಡಿದ್ದಾರೆ ಎಂದು ಸುಮಲತಾ ಬೆಂಬಲಿಗರು ತಿಳಿಸಿದ್ದಾರೆ.
‘ಕಾಮಗಾರಿಯಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರವನ್ನು ಸುಮಲತಾ ಪ್ರಶ್ನಿಸಿದ್ದರು. ಇದರ ಬಗ್ಗೆ ಯೋಜನಾಧಿಕಾರಿ ಪ್ರತಾಪ್ ಸಿಂಹ ಅವರಿಗೆ ದೂರು ನೀಡಿದಾಗ ಅವರು ನಮ್ಮ ಸಂಸದೆ ವಿರುದ್ಧ ಅವಹೇಳನಾಕಾರಿಯಾಗಿ ಮಾತನಾಡಿದ್ದಾರೆ. ಪ್ರತಾಪ್ ಸಿಂಹ ಅವರು ತಮ್ಮ ಕ್ಷೇತ್ರದ ಸಮಸ್ಯೆ ನೋಡಿಕೊಳ್ಳಲಿ, ನಮ್ಮ ಕ್ಷೇತ್ರದ ಸಮಸ್ಯೆ ಬಗೆಹರಿಸಲು ಅವರು ಬಾರದಿರುವುದೇ ಒಳ್ಳೆಯದು’ ಎಂದು ಸುಮಲತಾ ಬೆಂಬಲಿಗ ಸೋಮಶೇಖರ್ ತಿಳಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ